ನವದೆಹಲಿ, ಏಪ್ರಿಲ್ 30: ಪಹಲ್ಗಾಮ್ನಲ್ಲಿ ನಡೆದ ಉಗ್ರ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಇಂದು ಸಂಪುಟ ಸಮಿತಿಗಳ ಸಭೆ ನಡೆಸಲಿದ್ದಾರೆ. ಪಾಕಿಸ್ತಾನ ವಿರುದ್ಧ ಮತ್ತಷ್ಟು ನಿರ್ಣಯಗಳು ಬರುವ ಸಾಧ್ಯತೆ ಇದೆ. 2019 ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ (CCPA) ಕೊನೆಯದಾಗಿ ಸಭೆ ಸೇರಿತ್ತು.
ಮೂರನೇ ಸಭೆಯು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯದ್ದಾಗಿದ್ದು, ಪಾಕಿಸ್ತಾನದ ಮೇಲೆ ಆರ್ಥಿಕ ಒತ್ತಡವನ್ನು ಹೆಚ್ಚಿಸುವ ಕಾರ್ಯತಂತ್ರದ ಕುರಿತು ಚರ್ಚಿಸಲಾಗುವುದು. ಉರಿ ಮತ್ತು ಪುಲ್ವಾಮಾ ದಾಳಿಗಳ ನಂತರ ಭಾರತವು ಪಾಕಿಸ್ತಾನವನ್ನು ಆರ್ಥಿಕವಾಗಿ ದುರ್ಬಲಗೊಳಿಸುವಲ್ಲಿ ಈಗಾಗಲೇ ಯಶಸ್ವಿಯಾಗಿದೆ.