ಬೆಂಗಳೂರು, ಏಪ್ರಿಲ್ 30: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್ 15ರ ವರೆಗೆ ವಿಸ್ತರಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಆ ಮೂಲಕ ರೈಡ್-ಹೇಲಿಂಗ್ ಕಂಪನಿಗಳಿಗೆ ಬೈಕ್ ಟ್ಯಾಕ್ಸಿ ಸೇವೆಗಳನ್ನು ಒದಗಿಸಲು ಇನ್ನೂ ಒಂದು ತಿಂಗಳು ಕಾಲಾವಕಾಶ ಸಿಕ್ಕಂತಾಗಿದೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಮುಂದುವರೆಸಲು ನಿರ್ದೇಶನ ಕೋರಿ ರೊಪ್ಪೆನ್ ಟ್ರಾನ್ಸ್ಪೋರ್ಟೇಶನ್ ಸರ್ವೀಸ್ ಲಿಮಿಟೆಡ್ ಸೇರಿದಂತೆ ಇತರೆ ಕಂಪನಿಗಳು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಪರಿಗಣಿಸಿ ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಅವರಿದ್ದ ನ್ಯಾಯಪೀಠದಿಂದ ಆದೇಶ ಹೊರಡಿಸಲಾಗಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದು, ರೋಪೆನ್ ಟ್ರಾನ್ಸ್ಫರ್ಮೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಪ್ರಕಾರ, ಕರ್ನಾಟಕದಲ್ಲಿ ಆರು ಲಕ್ಷಕ್ಕೂ ಹೆಚ್ಚು ನೋಂದಾಯಿತ ಬೈಕ್ ಟ್ಯಾಕ್ಸಿಗಳಿದ್ದು, ಆ ಮೂಲಕ ಸವಾರರು ತನ್ನ ಜೀವನ ನಡೆಸುತ್ತಿದ್ದಾರೆ. ಒಂದು ವೇಳೆ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸ್ಥಗಿತಗೊಳಿಸಿದರೇ ಅವರು ತೀವ್ರ ಸಂಕಷ್ಟಕ್ಕೆ ಸಿಲುಕಬಹುದು ಎಂದು ಹೇಳಿದ್ದಾರೆ.