ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಶ್ರೀ ವಾಸವಿ ವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ

Ravi Talawar
ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಶ್ರೀ ವಾಸವಿ ವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ
WhatsApp Group Join Now
Telegram Group Join Now
ಬಳ್ಳಾರಿ,ಮೇ.೦5.: ೨೦೨೪-೨೫ನೇ ಶೈಕ್ಷಣಿಕ ಸಾಲದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ  ಪ್ರಕಟಗೊಂಡಿದ್ದು, ಶ್ರೀ ವಾಸವಿ ವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮೂಲಕ ಶಾಲೆಯ ಗೌರವವನ್ನು ಹೆಚ್ಚಿಸಿದ್ದಾರೆ.
ಬನಶ್ರೀ ೫೬೪ ಅಂಕಗಳನ್ನು ಗಳಿಸುವುದರ ಮೂಲಕ ಪ್ರಥಮ ಸ್ಥಾನ ಪಡೆದಿದ್ದಾರೆ. ೫ ಡಿಸ್ಟಿಂಕ್ಷನ್, ೧೮ ಫಸ್ಟ್ ಕ್ಲಾಸ್, ೭ ಸೆಕೆಂಡ್ ಕ್ಲಾಸ್ ಪಡೆಯುವುದರ ಮೂಲಕ  ಶಾಲೆಯ ಶ್ರೇಯಸ್ಸಿಗೆ ಸಾಕ್ಷಿಯಾಗಿದ್ದಾರೆ.
“ನಮ್ಮ ಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಈ ವರ್ಷವೂ ಉತ್ತಮ ಫಲಿತಾಂಶ ಗಳಿಸಿರುವುದು ನಮಗೆ ಹೆಮ್ಮೆಯ ವಿಷಯ. ವಿದ್ಯಾರ್ಥಿಗಳ ಶ್ರಮ, ಶಿಕ್ಷಕರ ಮಾರ್ಗದರ್ಶನ ಮತ್ತು ಪಾಲಕರ ಸಹಕಾರವೇ ಈ ಯಶಸ್ಸಿನ ಮೂಲ. ಪ್ರತಿಯೊಬ್ಬ ವಿದ್ಯಾರ್ಥಿಗೂ ಹೃದಯಪೂರ್ವಕ ಅಭಿನಂದನೆಗಳು. ಅವರು ಮುಂದಿನ ವಿದ್ಯಾಭ್ಯಾಸ ಮತ್ತು ಜೀವನದಲ್ಲಿ ಉತ್ತಮ ಸಾಧನೆ ಮಾಡಲಿ ಎಂಬುದು ನಮ್ಮ ಆಶಯ. ನಾವು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ದಿಗೆ ಸದಾ ಬದ್ಧರಾಗಿದ್ದೇವೆ ಎಂದು ಶ್ರೀ ವಾಸವಿ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ವಿಟ್ಟ ಕೃಷ್ಣಕುಮಾರ್ ರವರು ಹರ್ಷ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಈ ಅಮೋಘ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ ಹರ್ಷದಿಂದ ಅಭಿನಂದಿಸಿದ್ದು, ಮುಂದಿನ ಹಂತದಲ್ಲಿಯೂ ಈ ರೀತಿ ಶೈಕ್ಷಣಿಕ ಪ್ರಗತಿ ನಿರಂತರವಾಗಲಿ ಎಂಬ ಆಶಯ ವ್ಯಕ್ತಪಡಿಸಲಾಗಿದೆ.
ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಕಾರ್ಯದರ್ಶಿಗಳು ತಮ್ಮ ಶುಭಾಶಯಗಳನ್ನು ವ್ಯಕ್ತಪಡಿಸಿ, ಈ ಸಾಧನೆಗೆ ಕಾರಣರಾದ ಎಲ್ಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಪಾಲಕರಿಗೆ ಧನ್ಯವಾದ ತಿಳಿಸಿದ್ದಾರೆ
WhatsApp Group Join Now
Telegram Group Join Now
Share This Article