ಬೆಳಗಾವಿ.ಏಪ್ರಿಲ್ 22, 2025ರಂದು ಜಮ್ಮುಕಾಶ್ಮೀರದಲ್ಲಿ ಪಾಕಿಸ್ತಾನದ ನೆರವಿನಿಂದ 26 ಜನ ಅಮಾಯಕ ಭಾರತೀಯ ಪ್ರಜೆಗಳನ್ನು ಉಗ್ರರುಧರ್ಮವನ್ನು ಕೇಳಿ ತಿಳಿದು ಗುಂಡಿಕ್ಕಿ ಕೊಂದಿರುವುದನ್ನು ನೋಡಿ ಇಡೀ ದೇಶ ದಿಗ್ಧಾಂತವಾಗಿದೆ.ಈ ಅತ್ಯಂತ ದಾರುಣವಾದಂತಹ ದಾಳಿಯನ್ನು ಪಾಕಿಸ್ತಾನದಬೇಹುಗಾರಿಕಾ ಸಂಸ್ಥೆಯಾದ ಐ.ಎಸ್.ಐ. ನೆರವಿನಿಂದ ಪಾಕಿಸ್ತಾನ ಸೇನೆ ಇಡೀ ದಾಳಿಯಯೋಜನೆಯನ್ನು ರೂಪಿಸಿ ಇಂತಹ ಬರ್ಬರ ಹತ್ಯಾಕಾಂಡವನ್ನು ಅರಗಿಸಿಕೊಳ್ಳಲಾಗದೆ ಇಡೀದೇಶ ಅತ್ಯಂತ ದೊಡ್ಡ ಆಘಾತಕ್ಕೊಳಗಾಗಿದೆ ಹಾಗೂ ಜಗತ್ತಿನ ಎಲ್ಲಾ ದೊಡ್ಡ ಶಕ್ತಿಶಾಲಿ ರಾಷ್ಟ್ರಗಳು
ಭಾರತದ ಜೊತೆ ನಿಲ್ಲುವುದಾಗಿ ಘೋಷಿಸಿವೆ.
ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಈ ಕುಕೃತ್ಯಕ್ಕೆಕಾರಣರಾದವರು ಯಾರೇ ಆಗಿರಲಿ ಜಗತ್ತಿನ ಯಾವುದೇ ಮೂಲೆಯಲ್ಲಿ ಅಡಗಿ ಕುಳಿತಿದ್ದರೂಅವರನ್ನು ಹಾಗೂ ಅವರಿಗೆ ಪ್ರೇರಣೆ ನೀಡಿದವರ ರುಂಡವನ್ನು ಚೆಂಡಾಡುವುದಾಗಿ ಪ್ರತಿಜ್ಞೆಮಾಡಿದ್ದಾರೆ. ಪ್ರಧಾನಿಗಳು ಭಾರತೀಯ ಸೇನಾ ಪಡೆಗಳಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲುಮುಕ್ತ ಅನುಮತಿ ನೀಡಿದ್ದಾರೆ. ನಮ್ಮೆಲ್ಲರಿಗೂ ತಿಳಿದೇ ಇದೆ. ನಮ್ಮ ಸೇನಾ ಪಡೆಗಳು ಉಗ್ರರನ್ನುನಾಶ ಮಾಡೇ ತೀರುತ್ತವೆ ಎಂಬ ದೃಢ ವಿಶ್ವಾಸವಿದೆ.ದೇಶದ ಇಡೀ 140 ಕೋಟಿ ಜನರು ಸನ್ಮಾನ್ಯ ಪ್ರಧಾನ ಮಂತ್ರಿಗಳು ಹಾಗೂ ಸೇನಾ
ಪಡೆಗಳ ಜೊತೆಗೆ ತೊಡೆತಟ್ಟಿ ನಿಂತಿದ್ದಾರೆ.
ಈ ದುರ್ಘಟನೆಯ ನಂತರದಲ್ಲಿ ಕೇಂದ್ರ ಸರ್ಕಾರವು ಸಿಂಧೂ ನದಿ ನೀರಿನ ಒಪ್ಪಂದಕ್ಕೆಇತಿಶ್ರೀ ಹಾಡಿ ಐತಿಹಾಸಿಕ ನಿರ್ಣಯ ತೆಗೆದುಕೊಂಡಿರುವುದು ಮಾತ್ರವಲ್ಲದೇಪಾಕಿಸ್ತಾನದೊಂದಿಗಿನ ಎಲ್ಲಾ ರಾಜತಾಂತ್ರಿಕ ಸಂಬಂಧಗಳನ್ನು ಕಡಿತಗೊಳಿಸಿ ಹಾಗೂ ಪಾಕಿಸ್ತಾನಿಪ್ರಜೆಗಳಿಗೆ ಭಾರತಕ್ಕೆ ಬರುವ ವೀಸಾ ನಿಲ್ಲಿಸಿದೆ ಹಾಗೂ ನಿಯಮಿತ ಸಮಯದಲ್ಲಿ ಭಾರತರಲ್ಲಿರುವಎಲ್ಲಾ ಪಾಕಿಸ್ತಾನಿ ಪ್ರಜೆಗಳು ಹಿಂತಿರುಗುವಂತೆ ಕಟ್ಟಾಜ್ಞೆ ಹೊರಡಿಸಿದೆ.
ಗೃಹ ಸಚಿವಾಲಯದ ಆಜ್ಞಾ ಪತ್ರ ಸಂಖ್ಯೆ 25022/28/2025/F.I ,25/04/25 ರ ಅನ್ವಯ ಹಾಗೂ ಸೆಕ್ಷನ್ 3(1) 1946 ವಿದೇಶಿಗರ ಕಾಯ್ದೆಗೆ ವಿಶೇಷ ಅಧಿಕಾರ ನೀಡಿ(ದೀರ್ಘಾವದಿ ಹಾಗೂ ರಾಜತಾಂತ್ರಿಕ ಮತ್ತು ಅಧೀಕೃತ ವೀಸಾಗಳನ್ನು ಹೊರತುಪಡಿಸಿ)ಪಾಕಿಸ್ತಾನಿ ಪ್ರಜೆಗಳಿಗೆ ಭಾರತದ ವೀಸಾ ವಿತರಣೆಯನ್ನು ಅಮಾನತ್ತಿನಲ್ಲಿಡಲಾಗಿದೆ.
ಈ ನಿಟ್ಟಿನಲ್ಲಿ (ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ) ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳು92 ಬೆಳಗಾವಿ ಜಿಲ್ಲೆಯಲ್ಲಿರುವ 9 ಜನಅಕ್ರಮವಾಗಿ ನೆಲೆಸುತ್ತಿರುವ ಪಾಕಿಸ್ತಾನಿ ಪ್ರಜೆಗಳು ರದ್ದಾಗಿರುವ
ವೀಸಾಗಳು ಹಾಗೂ ಅಮಾನತ್ತಿನಲ್ಲಿರುವ ವೀಸಾಗಳನ್ನು ಹೊಂದಿಕೊಂಡು ವಾಸಿಸುತ್ತಿರುವಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಗಡಿಪಾರು ಮಾಡಲು ರಾಷ್ಟ್ರೀಯ ನಿರ್ದೇಶನವಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಇನ್ನೂ ಸೂಕ್ತ ಕ್ರಮ ಕೈಗೊಳ್ಳದಿರುವುದು ದುರಾದೃಷ್ಟಕರ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಹಾಗೂ ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ ಅವರು ಆಕ್ರೋಶ ವ್ಯಕ್ತಪಡಿಸಿದರು ಇದೇ 6-5-2025 ಮಂಗಳವಾರ ಬೆಳಿಗ್ಗೆ 10:00am ಗಂಟೆಗೆ ನಗರದ ರಾಣಿ ಚೆನ್ನಮ್ಮ ಸರ್ಕಲ್ ಹತ್ತಿರ ರಾಜ್ಯ ಕಾಂಗ್ರೆಸ್ ಸರ್ಕಾರದ ಧ್ವಂದ ನೀತಿ ಖಂಡಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.