ಐಪಿಎಲ್‌ ಪಂದ್ಯ ನಿಷೇಧಕ್ಕೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಆಗ್ರಹ 

Ravi Talawar
ಐಪಿಎಲ್‌ ಪಂದ್ಯ ನಿಷೇಧಕ್ಕೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಆಗ್ರಹ 
WhatsApp Group Join Now
Telegram Group Join Now
ಬೆಂಗಳೂರು,: ಭಾರತ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ ದಾಳಿ ನಡೆಸುವ ಸಾಧ್ಯತೆಗಳಿರುವುದರಿಂದ ಆಟಗಾರರು ಮತ್ತು ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್ ಪಂದ್ಯಗಳನ್ನು ‌ತಕ್ಷಣದಿಂದಲೇ  ನಿಷೇಧಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಆಗ್ರಹಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಮೇಲೆ ಆಪರೇಷನ್‌ ಸಿಂಧೂರ ಹೆಸರಿನ ಕಾರ್ಯಾಚರಣೆ ನಡೆಸಿದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ದಾಳಿ ನಡೆಸುತ್ತಿದೆ. ಇದರಿಂದ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ಇದೆ. ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್‌ ಪಂದ್ಯಗಳನ್ನು ನಿಲ್ಲಿಸಬೇಕು ಎಂದು ಅವರು ಹೇಳಿದ್ದಾರೆ.
ಆಪರೇಷನ್‌ ಸಿಂಧೂರ ನಂತರ ಕೆಲವು ಐಪಿಎಲ್‌ ಪಂದ್ಯಗಳನ್ನು ಸ್ಥಳಾಂತರ ಮಾಡಲಾಗಿದೆ. ಇದೀಗ ಎಲ್ಲಾ ಪಂದ್ಯಗಳನ್ನು ಸ್ಥಗಿತಗೊಳಿಸಿದರೆ ಒಳ್ಳೆಯದು. ಕ್ರಿಕೆಟ್‌ ವೀಕ್ಷಿಸಲು ಸಾಕಷ್ಟು ಜನರು ಬರುತ್ತಾರೆ. ಆದ್ದರಿಂದ ಬಿಸಿಸಿಐ ಇನ್ನು ಮುಂದಿನ ಎಲ್ಲಾ ಪಂದ್ಯಗಳನ್ನು ನಿಲ್ಲಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಬಿಸಿಸಿಐ ಗೆ ಸೂಚನೆ ನೀಡಬೇಕು   ಎಂದು ಲಾಡ್‌ ಅವರು ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article