ನವದೆಹಲಿ: ಪಾಕಿಸ್ತಾನವು ದುರುದ್ದೇಶಪೂರಿತ ತಪ್ಪು ಮಾಹಿತಿಯನ್ನು ಈ ಯುದ್ಧದ ಸಮಯದಲ್ಲಿ ಹಬ್ಬಿಸುತ್ತಿದೆ ಎಂದು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹೇಳಿದ್ದಾರೆ, ಇಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿಗಳೊಂದಿಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸೂರತ್‌ನಲ್ಲಿ ಭಾರತದ ಎಸ್-400 ವ್ಯವಸ್ಥೆ ಮತ್ತು ವಾಯುನೆಲೆಗಳನ್ನು ನಾಶಪಡಿಸಿದ ಪಾಕಿಸ್ತಾನದ ಹೇಳಿಕೆ ಸುಳ್ಳು ಎಂದಿದ್ದಾರೆ.
ಭಾರತೀಯ ಸಶಸ್ತ್ರ ಪಡೆಗಳು ಗುರುತಿಸಲಾದ ಮಿಲಿಟರಿ ಗುರಿಗಳ ಮೇಲೆ ಮಾತ್ರ ನಿಖರವಾದ ದಾಳಿ ನಡೆಸಿವೆ. ಪಾಕಿಸ್ತಾನವು ನಿರಂತರ ದುರುದ್ದೇಶಪೂರಿತ ತಪ್ಪು ಮಾಹಿತಿಯನ್ನು ಹರಡುತ್ತಿದೆ, ಭಾರತೀಯ ಎಸ್-400 ವ್ಯವಸ್ಥೆಯನ್ನು ನಾಶಪಡಿಸಲಾಗಿದೆ, ಸೂರತ್‌ಗಢ ಮತ್ತು ಸಿರ್ಸಾದಲ್ಲಿನ ವಾಯುನೆಲೆಗಳನ್ನು ನಾಶಪಡಿಸಲಾಗಿದೆ ಎಂಬ ಪಾಕಿಸ್ತಾನದ ಹೇಳಿಕೆಗಳು ಸುಳ್ಳು ಎಂದರು.
ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಕೂಡ ಇದನ್ನು ದೃಢಪಡಿಸಿದರು, ಪಾಕಿಸ್ತಾನವು ಸುಳ್ಳು, ತಪ್ಪು ಸುದ್ದಿಯನ್ನು ಹರಡುತ್ತಿದೆ ಎಂದರು. ಪಾಕಿಸ್ತಾನ ಕೈಗೊಂಡ ಚಟುವಟಿಕೆಗಳ ಬಗ್ಗೆ ಪಾಕಿಸ್ತಾನದ ಹೇಳಿಕೆಗಳು ಸುಳ್ಳು, ತಪ್ಪು ಮಾಹಿತಿ ಮತ್ತು ಪ್ರಚಾರದಿಂದ ತುಂಬಿವೆ. ಪಾಕಿಸ್ತಾನ ಸರ್ಕಾರದ ಬೆಂಬಲಿತ ಸಂಸ್ಥೆಗಳು ಕೂಡ ಇದಕ್ಕೆ ಪ್ರೋತ್ಸಾಹ ನೀಡುತ್ತಿವೆ. ದೇಶದಲ್ಲಿನ ವಿವಿಧ ಮಿಲಿಟರಿ ಸ್ಥಾಪನೆಗಳ ಮೇಲೆ ದಾಳಿ ಮಾಡಿ ನಾಶಪಡಿಸುವ ಬಗ್ಗೆ ಅವರು ಮಾಡಿರುವ ಹೇಳಿಕೆಗಳು ಸಂಪೂರ್ಣವಾಗಿ ಸುಳ್ಳು ಎಂದರು