ಪಾಕ್‌ ಮತ್ತು ಭಾರತ ಯುದ್ಧ ಸ್ಥಿತಿ ಗಂಭಿರ; ಉದ್ವಿಗ್ನತೆ ಶಮನಕ್ಕೆ ಅಮೆರಿಕ ಮಧ್ಯಸ್ಥಿಕೆ

Ravi Talawar
ಪಾಕ್‌ ಮತ್ತು ಭಾರತ ಯುದ್ಧ ಸ್ಥಿತಿ ಗಂಭಿರ; ಉದ್ವಿಗ್ನತೆ ಶಮನಕ್ಕೆ ಅಮೆರಿಕ ಮಧ್ಯಸ್ಥಿಕೆ
WhatsApp Group Join Now
Telegram Group Join Now

 ನವದೆಹಲಿ:  ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ, ಅಮೆರಿಕ ಮಧ್ಯಸ್ಥಿಕೆ ವಹಿಸಲು ಮುಂದಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಮೆರಿಕ ತೀವ್ರ ಮಾತುಕತೆಯನ್ನು ನಡೆಸಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ  ಅವರು ಇಂದು (ಮೇ.10) ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಅವರೊಂದಿಗೆ ಮಾತನಾಡಿ ಭಾರತ ಮತ್ತು ಪಾಕಿಸ್ತಾನದ ನಡುವೆ ನೇರ ಸಂವಹನ ನಡೆಸುವಂತೆ ಹೇಳಿದ್ದಾರೆ. ಇತ್ತ ಭಾರತದ ವಿದೇಶಾಂಗ ಸಚಿವ ಜೈಶಂಕರ್​​ ಜತೆಗೂ ಮಾತನಾಡಿದೆ ಎಂದು ಹೇಳಿದೆ. ಈ ಬಗ್ಗೆ ಅಮೆರಿಕದ ವಿದೇಶಾಂಗ ಇಲಾಖೆಯ ಪತ್ರಿಕಾ ಹೇಳಿಕೆ ನೀಡಿದೆ.

ಭವಿಷ್ಯದ ಸಂಘರ್ಷಗಳನ್ನು ತಪ್ಪಿಸಲು ಹಾಗೂ ಎರಡೂ ದೇಶಗಳ ನಡುವೆ ರಚನಾತ್ಮಕ ಮಾತುಕತೆ ಪ್ರಾರಂಭಿಸಲು ಅಮೆರಿಕದ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. ಈ ಬಗ್ಗೆ ಭಾರತದ ವಿದೇಶಾಂಗ ಸಚಿವ ಜೈಶಂಕರ್​​ ಜತೆಗೂ ಮಾತನಾಡಿದ್ದಾರೆ. ಹಾಗೂ ಶುಕ್ರವಾರ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಜತೆಗೂ ವಿಚಾರವಾಗಿ ಮಾತನಾಡಿದ್ದಾರೆ. ಇಂದು ಬೆಳಿಗ್ಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಜೈಶಂಕರ್​​ ಜತೆಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದ್ದಾರೆ. ಭಾರತದ ವಿಧಾನವು ಯಾವಾಗಲೂ ಕ್ರಮಬದ್ಧವಾಗಿರುವುದು ಮತ್ತು ಜವಾಬ್ದಾರಿಯುತವಾಗಿದೆ ಹಾಗೂ ಅದು ಇವತ್ತಿಗೂ ಹಾಗೆಯೇ ಉಳಿದಿದೆ ಎಂದು ಜೈಶಂಕರ್​​​ ಹೇಳಿದ್ದಾರೆ.

WhatsApp Group Join Now
Telegram Group Join Now
Share This Article