ಬಳ್ಳಾರಿ,ಮೇ 12 ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜೀವರಾಯನ ಕೋಟೆ ಗ್ರಾಮದ 2ನೇ ವಾರ್ಡ್ನ ಎಸ್.ಸಿ ಕಾಲೋನಿಯ ಯನ್ನಪ್ಪ ತಾತ ದೇವಸ್ಥಾನದ ಬಳಿ ನಿವಾಸಿಯಾದ ಹೆಚ್. ವಿರೇಶ್ ಎನ್ನುವ 29 ವರ್ಷದ ವ್ಯಕ್ತಿಯು 2024 ರ ಆ.13 ರಂದು ರಂದು ಕಾಣೆಯಾಗಿದ್ದು, ಈ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.
ಚಹರೆ ಗುರುತು:
ಅಂದಾಜು 5.6 ಅಡಿ ಎತ್ತರ, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬು ತೋಳಿನ ಶರ್ಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾನೆ.
ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.