ಗಣೇಶಪುರ ಗ್ರಾಮದ ಲಿಂಗರಾಜ ಕಾಲೋನಿಯ ಶಿವಾಲಯದ 12 ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ದ್ವೀತಿಯ ಪಿ.ಯು.ಸಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳನ್ನು ಪಡೆದು ತೇರ್ಗಡೆಗೊಂಡ ಕಾಲೋನಿಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಬಾನುಮತಿ ಬೆಂಡಿಗೇರಿ, ಗಾಯತ್ರಿ ರೊಟ್ಟಿ, ಶೋಭಾ ಮೂಗಿ, ಡಾ.ಮಗದುಮ್, ವರಮಾ ಮಂಡಳಿಯ ಸದಸ್ಯರು, ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.