ಶೋಪಿಯಾನ್, ಮೇ 13: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕೆಲ್ಲಾರ್ನ ಶುಕ್ರೂ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದೆ. ಮೂವರು ಉಗ್ರರು ಹತರಾಗಿದ್ದಾರೆ. ಪೊಲೀಸ್, ಸೇನೆ ಮತ್ತು ಸಿಆರ್ಪಿಎಫ್ನ ಜಂಟಿ ತಂಡವು ಅರಣ್ಯ ಪ್ರದೇಶದಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ವರದಿಗಳು ತಿಳಿಸಿವೆ. ಪಡೆಗಳ ಜಂಟಿ ತಂಡವು ಶಂಕಿತ ಸ್ಥಳದ ಕಡೆಗೆ ಸಮೀಪಿಸುತ್ತಿದ್ದಂತೆ, ಅಡಗಿಕೊಂಡಿದ್ದ ಉಗ್ರಗಾಮಿಗಳು ಪಡೆಗಳ ಮೇಲೆ ಗುಂಡು ಹಾರಿಸಿದರು, ಗುಂಡಿನ ಚಕಮಕಿ ನಡೆಯಿತು.
ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಗೆ ಕಾರಣರಾದವರ ಬಗ್ಗೆ ವಿಶ್ವಾಸಾರ್ಹ ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸುವ ಪೋಸ್ಟರ್ಗಳು ಪುಲ್ವಾಮಾ ಜಿಲ್ಲೆಯಾದ್ಯಂತ ಕಾಣಿಸಿಕೊಂಡ ಕೆಲವೇ ಗಂಟೆಗಳ ನಂತರ ಈ ಎನ್ಕೌಂಟರ್ ನಡೆದಿದೆ.