ನವದೆಹಲಿ, ಮೇ 14: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಮುಂದುವರೆದಿದೆ. ಏತನ್ಮಧ್ಯೆ, ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈಗಾಗಲೇ ಇರುವ ಝಡ್ ಭದ್ರತೆ ಜತೆಗೆ ಬುಲೆಟ್ ಪ್ರೂಫ್ ಕಾರು ಕೂಡ ಸರ್ಕಾರ ಒದಗಿಸಲಿದೆ. ದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ. ಎಸ್ ಜೈಶಂಕರ್ ಅವರಿಗೆ ಈಗಾಗಲೇ ಗೃಹ ಸಚಿವಾಲಯವು Z ವರ್ಗದ ಭದ್ರತೆಯನ್ನು ಒದಗಿಸಿದೆ.
ಇತ್ತೀಚಿನ ದಿನಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚಿರುವ ಸಮಯದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಷ್ಟೇ ಅಲ್ಲ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಿಒಕೆ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು .