ಇನ್ಮುಂದೆ 108 ಆ್ಯಂಬುಲೆನ್ಸ್ ಸೇವೆ ಮತ್ತು ನಿರ್ವಹಣೆ ಸರ್ಕಾರದ ಜವಾಬ್ದಾರಿ: ಸಚಿವ ದಿನೇಶ್‌ ಗುಂಡೂರಾವ್‌

Ravi Talawar
ಇನ್ಮುಂದೆ 108 ಆ್ಯಂಬುಲೆನ್ಸ್ ಸೇವೆ ಮತ್ತು ನಿರ್ವಹಣೆ ಸರ್ಕಾರದ ಜವಾಬ್ದಾರಿ: ಸಚಿವ ದಿನೇಶ್‌ ಗುಂಡೂರಾವ್‌
WhatsApp Group Join Now
Telegram Group Join Now

ಬೆಂಗಳೂರು, ಮೇ 14: ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್  ಸರ್ವಿಸ್ ನೀಡುತ್ತದೆ. ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಡೆಯುವುದಿಲ್ಲ. ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. ಸಂಪೂರ್ಣ ಸರ್ವಿಸ್ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ. ಆರೋಗ್ಯ ಇಲಾಖೆಯಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಹೇಳಿದ್ದಾರೆ.

ನಗರದ ಶೇಷಾದ್ರೀಪುರಂ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡುರಾವ್, ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ ಎಂದು ಹೇಳಿದ್ದಾರೆ. 108 ಆ್ಯಂಬುಲೆನ್ಸ್ ಸಿಬ್ಬಂದಿ ಮೂರು ಶಿಫ್ಟ್ ವಿಚಾರವಾಗಿ ಮಾತನಾಡಿದ ಅವರು, ಇದು ಏಜೆನ್ಸಿ ಮೂಲಕ ನಡೆಯುತ್ತದೆ. ಹೀಗಾಗಿ ಸಿಬ್ಬಂದಿಗಳು ಏಜೆನ್ಸಿ ಜೊತೆ ಮಾತನಾಡಬೇಕು ಎಂದಿದ್ದಾರೆ.

30 ಸಾವಿರ ಸಿಬ್ಬಂದಿ ವೇತನವಾಗದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, 2023-24 ರಲ್ಲಿ ಓಪನಿಂಗ್ ಬ್ಯಾಲೆನ್ಸ್ ಹೆಚ್ಚು ಇರ್ತಾ ಇತ್ತು. ಆದರೆ ಕಳೆದ ಸರ್ಕಾರದಿಂದ ಓಪನಿಂಗ್ ಬ್ಯಾಲೆನ್ ಕಡಿಮೆಯಾಗಿದೆ. ಹೀಗಾಗಿ ನಾವು ರಾಜ್ಯ ಸರ್ಕಾರದಿಂದ ಕೊಡಲು ಆಗುತ್ತಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡದ ಹಿನ್ನಲೆ ಕೊಂಚ ಲೇಟ್ ಆಗಿದೆ. ಇನ್ನೇರಡು ಮೂರು ದಿನಗಳಲ್ಲಿ ವೇತನ ಆಗಬಹುದು. ನಾವು ಯಾವುದೇ ವೇತನ ತಡೆ ಹಿಡದಿಲ್ಲ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
Share This Article