ಬಳ್ಳಾರಿ: 16,.ಆಯುಷ್ ಆಸ್ಪತ್ರೆ, ಚಿಕಿತ್ಸಾಲಯಗಳಿಗೆ ಔಷಧ ಹಾಗೂ ಉಪಕರಣಗಳ ಖರೀದಿಗೆ ಸಂಬಂಧಿಸಿದಂತೆ ಜಿಲ್ಲೆಗಳಲ್ಲಿ ಆಕ್ರಮಣ, ಭ್ರಷ್ಟಾಚಾರ, ಕರ್ತವ್ಯ ಲೋಪ ಆರೋಪ ಹಿನ್ನೆಲೆ ಆಯುಷ್ ಇಲಾಖೆಯ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪಿ.ಕೆ.ಶ್ರೀಪತಿ ಅವರು ಮೇ.8ರಂದು ಆದೇಶ ಹೊರಡಿಸಿದ್ದಾರೆ. ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಆಯುಷ್ ಆಸ್ಪತ್ರೆ, ಚಿಕಿತ್ಸಾಲಯಗಳಿಗೆ ಕಳೆದ 2023 -24 ಮತ್ತು 2024 -25ನೇ ಸಾಲಿನಲ್ಲಿ ಔಷಧ ಮತ್ತು ಉಪಕರಣಗಳ ಖರೀದಿಗೆ ಸಂಬಂಧಿಸಿದಂತೆ ಅಕ್ರಮ, ಭ್ರಷ್ಟಾಚಾರ, ಕರ್ತವ್ಯ ಲೋಪ ಆರೋಪಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲೆಯ ಆಯುಷ್ ಅಧಿಕಾರಿ ಹಾಗೂ ವಿಜಯನಗರ ಜಿಲ್ಲೆಯ ಪ್ರಭಾರ ಅಧಿಕಾರಿ ಡಾ.ಸರಳಾದೇವಿ, ಜಿಲ್ಲಾ ಆಯುಷ್ ಇಲಾಖೆ ಕಚೇರಿಯ ಆಡಳಿತಾಧಿಕಾರಿ ಶರಣಪ್ಪ ಜಿನಾಗ, ಕಚೇರಿ ಅಧೀಕ್ಷಕ ಖಲಂದರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಪ್ರಾಧಿಕಾರದ ಅನುಮತಿ ಪಡೆಯದೇ ಕೇಂದ್ರ ಸ್ಥಾನವನ್ನು ಬಿಟ್ಟು ತೆರಳುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.