ಮುಂಬೈ, ಮೇ 17: ಶುಕ್ರವಾರ ರಾತ್ರಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಐಸಿಸ್ ಸ್ಲೀಪರ್ ಸೆಲ್ನ ಇಬ್ಬರು ಉಗ್ರರು ಎನ್ಐಎ ಬಲೆಗೆ ಬಿದ್ದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶನಿವಾರ ಬೆಳಗ್ಗೆ ತಿಳಿಸಿದ್ದಾರೆ.
2023 ರಲ್ಲಿ ಪುಣೆಯಲ್ಲಿ ಐಇಡಿಗಳ ತಯಾರಿಕೆ ಮತ್ತು ಪರೀಕ್ಷೆಗೆ ಸಂಬಂಧಿಸಿದ ಪ್ರಕರಣದಲ್ಲಿ ಇವರಿಬ್ಬರು ಎನ್ಐಎಗೆ ಬೇಕಾಗಿದ್ದರು. ಬಂಧಿತರನ್ನು ಅಬ್ದುಲ್ಲಾ ಫೈಯಾಜ್ ಶೇಖ್ ಅಲಿಯಾಸ್ ಡಯಾಪರ್‌ವಾಲಾ ಮತ್ತು ತಲ್ಹಾ ಖಾನ್ ಎಂದು ಗುರುತಿಸಲಾಗಿದೆ. ಆರೋಪಿಗಳು ಇವರು ಇಂಡೋನೇಷ್ಯಾದ ಜಕಾರ್ತಾದಿಂದ ಭಾರತಕ್ಕೆ ಬರುತ್ತಿದ್ದರು. ಈ ಸಂದರ್ಭದಲ್ಲಿ ವಲಸೆ ಬ್ಯೂರೋ ಅವರನ್ನು ತಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.