ಬೆಳಗಾವಿ.ಆಪರೇಷನ್ ಸಿಂಧೂರ ಯಶಸ್ವಿಯಾಗಿದ್ದಕ್ಕೆ ಹಾಗೂ ರಾಷ್ಟ್ರೀಯ ಭದ್ರತೆಗಾಗಿ ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ನಾವೆಲ್ಲರೂ ಇದ್ದೇವೆ ಎಂಬ ಸಂದೇಶವನ್ನು ನೀಡುವ ಉದ್ದೇಶದಿಂದ ತಿರಂಗಾ ರ್ಯಾಲಿಯನ್ನು ಹಮ್ಮಿಕೊಂಡಿದ್ದು
ಇದೇ ಸೋಮವಾರ 19-05-2025 ರಂದು ಸಾಯಂಕಾಲ 4:00pm ಘಂಟೆಗೆ ಬೆಳಗಾವಿ ನಗರದ ಡಾ.ಬಿ ಆರ್ ಅಂಬೇಡ್ಕರ್ ಉದ್ಯಾನವನದಿಂದ ಛತ್ರಪತಿ ಶಿವಾಜಿ ಮಹಾರಾಜರ ಉದ್ಯಾನವನದವರೆಗೆ, ತಿರಂಗಾ ರ್ಯಾಲಿ ನಡೆಯಲಿದೆ .
ಅದಕ್ಕಾಗಿ ಪಕ್ಷಾತೀತವಾಗಿ ಜಿಲ್ಲೆಯ ಎಲ್ಲ ಸಂಘಟನೆಗಳು, ಮಾಜಿ ಸೈನಿಕರು, ಕಾರ್ಮಿಕರು, ರೈತರು, ವಿದ್ಯಾರ್ಥಿಗಳು, ವಕೀಲರು, ಎಲ್ಲ ವೃತ್ತಿಪರರು,ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಿರಂಗಾ ರ್ಯಾಲಿಯನ್ನು(*tiranga rally*) ಯಶಸ್ವಿ ಗೊಳಿಸುವ ಮೂಲಕ ಸೈನಿಕರೊಂದಿಗೆ ನಾವಿದ್ದೇವೆ ಎಂಬ ಸಂದೇಶವನ್ನು ನೀಡೋಣ ಎಂದು ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ ಪಾಟೀಲ ಹಾಗೂ ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.