ಬಿಜಗರಣಿ* : ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಮಾತನಾಡಲು ನಿಂತರೆ ಒಂದು ದಿನ ಸಾಲುವುದಿಲ್ಲ. ಪ್ರತಿಯೊಬ್ಬರು ಅವರ ಜೀವನ ಚರಿತ್ರೆಯನ್ನು ಓದಬೇಕು. ಅವರ ಸಾಧನೆಯನ್ನು ತಿಳಿದುಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬಿಜಗರಣಿ ಗ್ರಾಮದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನೂತನ ಮೂರ್ತಿಯನ್ನು ಅನಾವರಣಗೊಳಿಸಿ ಮಾತನಾಡಿದ ಸಚಿವರು, ಇಂದಿನ ಯುವಕರು ಅಂಬೇಡ್ಕರ್ ಅವರ ಆದರ್ಶವನ್ನು ಇಟ್ಟುಕೊಂಡು ಓದಬೇಕು, ಬೆಳೆಯಬೇಕು, ಜೀವಿಸಬೇಕು.
ಇದೇ ಅವರಿಗೆ ನಿಜವಾಗಿ ನಾವು ನೀಡಬಹುದಾದ ಕೊಡುಗೆ ಎಂದರು.
ಲಕ್ಷ್ಮೀ ತಾಯಿ ಪೌಂಡೇಷನ್ ವತಿಯಿಂದ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ದೇಶಕ್ಕಾಗಿ ಸೇವೆ ಸಲ್ಲಿಸಿರುವ ಮಹನೀಯರ ಬಗ್ಗೆ ಇಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಕ್ಷೇತ್ರದಲ್ಲಿ ಅನೇಕ ಮಹನೀಯರ ಮೂರ್ತಿಗಳನ್ನು ಪ್ರತಿಷ್ಟಾಪನೆ ಮಾಡಲಾಗುತ್ತಿದೆ ಎಂದು ಹೇಳಿದರು.
ಅಂಬೇಡ್ಕರ್ ಅವರ ಬದುಕು, ತತ್ವ, ಆದರ್ಶಗಳು ನಮ್ಮೆಲ್ಲರ ಪಾಲಿಗೆ ಮಾರ್ಗದರ್ಶನ ವಾಗಿವೆ. ಸಮಾನತೆ ಮತ್ತು ಪ್ರಗತಿಯ ಕನಸು ಕಂಡ ಮೇರು ನಾಯಕ ಅವರು.
ಅವರ ಆದರ್ಶ ಎಲ್ಲರ ಜೀವನಕ್ಕೆ ದಾರಿದೀಪ. ಬಾಬಾ ಸಾಹೇಬರ ಚಿಂತೆನೆಗಳು ಇಂದಿಗೂ, ಎಂದಿಗೂ ಯುವಜನತೆಗೆ ಸ್ಫೂರ್ತಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಈ ಸಂದರ್ಭದಲ್ಲಿ ಯುವರಾಜ್ ಕದಂ, ಮಾವಳ್ಳಿ ಶಂಕರ್, ಸಿದ್ದಪ್ಪ ಕಾಂಬಳೆ, ಮನೋಹರ್ ಬೆಳಗಾಂವ್ಕರ್, ಸಂತೋಷ ಕಾಂಬಳೆ, ಸುತಾರಿ ಜಾಧವ್, ಮಹೇಶ ಕೋಲಕಾರ್, ನಿಂಗಪ್ಪ ಜಾಧವ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಖಾ ನಾಯ್ಕ್, ನಾಮದೇವ್ ಮೊರೆ, ಯಲ್ಲಪ್ಪ ಬೆಳಗಾಂವ್ಕರ್, ಬಾಳು ದೇಸೂರಕರ್, ತೆರಸೆ ಕುಟುಂಬದವರು ಸೇರಿದಂತೆ ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.