ಸಾಧನಾ ಸಮಾವೇಶದಲ್ಲಿ 3 ಲಕ್ಷಕ್ಕೂ ಹೆಚ್ಚು ಜನರು ಭಾಗಿ: ಅಲ್ಲಂ ಪ್ರಕಾಶ್‌

Ravi Talawar
ಸಾಧನಾ ಸಮಾವೇಶದಲ್ಲಿ 3 ಲಕ್ಷಕ್ಕೂ ಹೆಚ್ಚು ಜನರು ಭಾಗಿ: ಅಲ್ಲಂ ಪ್ರಕಾಶ್‌
WhatsApp Group Join Now
Telegram Group Join Now
ಬಳ್ಳಾರಿ19.: ಸಿ.ಎಂ.ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ 5 ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ಕಾಂಗ್ರೆಸ್ ಮಾತಿನಂತೆ ನಡೆದುಕೊಂಡಿದೆ. ಬಡವರು, ರೈತರು, ಎಲ್ಲ ವರ್ಗದವರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ನಮ್ಮ ಸರ್ಕಾರ 2 ವರ್ಷ ಪೂರೈಸಿದ್ದು, ಮೇ.20 ರಂದು ಹೊಸಪೇಟೆಯಲ್ಲಿ ಸಾಧನಾ ಸಮಾವೇಶವನ್ನು ಹಮ್ಮಿಕೊಂಡಿದೆ. ಕನಿಷ್ಠ 3 ರಿಂದ 4 ಲಕ್ಷ ಜನರು ಸೇರುವ ನಿರೀಕ್ಷೆಯಿದೆ ಎಂದು ಡಿಸಿಸಿ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅವರು ಹೇಳಿದರು.
ನಗರದ ಡಿಸಿಸಿ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನಮ್ಮ ಸರ್ಕಾರ ನುಡಿದಂತೆ 5 ಗ್ಯಾರಂಟೀ ಗಳನ್ನು ಅನುಷ್ಠಾನಕ್ಕೆ ತಂದಿದ್ದು, ಎಲ್ಲ ವರ್ಗದವರಿಗೂ ಅನುಕೂಲವಾಗಿದೆ. ರಾಜ್ಯದ 7 ಕೋಟಿ ಜನರಲ್ಲಿ ಕನಿಷ್ಠ ಅರ್ಧ ಜನರಿಗೆ ನಮ್ಮ ಜನಪ್ರಿಯ ಸರ್ಕಾರದ ಯೋಜನೆಗಳು ತಲುಪಿವೆ. ಇದರ ಯಶಸ್ಸು ಹಿನ್ನೆಲೆ, ಹೊಸಪೇಟೆಯಲ್ಲಿ ಎರಡು ವರ್ಷದ ಸಾಧನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬರೂ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.
ವಕ್ಫ್ ಬೋರ್ಡ್ ಅಧ್ಯಕ್ಷ, ಕೆಪಿಸಿಸಿ ಕಾರ್ಯದರ್ಶಿ ಹುಮಾಯೂನ್ ಖಾನ್ ಅವರು ಮಾತನಾಡಿ, ನಮ್ಮ ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದ್ದು, 5ದೂ ಗ್ಯಾರಂಟಿ ಗಳನ್ನು ತಂದಿದೆ. ಹೊಸಪೇಟೆಯ ಸಮಾವೇಶದಲ್ಲಿ  1 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುವುದು. ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ 1 ಲಕ್ಷ ಜನರು ಸೇರಲಿದ್ದಾರೆ ಎಂದು ಅಂದಾಜಿಸಲಾಗಿದೆ ಎಂದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಚಿದಾನಂದಪ್ಪ ಅವರು ಮಾತನಾಡಿ, ನುಡಿದಂತೆ ನಡೆದ ನಮ್ಮ ಸರ್ಕಾರ ಎರಡು ವರ್ಷಗಳಲ್ಲಿ ಜನಪ್ರಿಯ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ದೇಶದಲ್ಲೇ ಮಾದರಿಯಾಗಿದೆ. ಹೊಸಪೇಟೆಯಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ಹಾಗೂ ಮುಂದಿನ 3 ವರ್ಷದ ಅಭಿವೃದ್ದಿ ಕೆಲಸಗಳನ್ನು ಜನರ ಮುಂದಿಡಲಿದ್ದೇವೆ.  ಕಾರ್ಯಕ್ರಮಕ್ಕೆ ಎಐಸಿಸಿ  ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಿ.ಎಂ.ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಸರ್ಕಾರದ ಇಡಿ ಸoಪುಟದ ಸಚಿವರು ಭಾಗವಹಿಸಲಿದ್ದಾರೆ ಎಂದರು.
ಕೆಪಿಸಿಸಿ  ಮಾಧ್ಯಮ ವಕ್ತಾರ ವೆಂಕಟೇಶ್ ಹೆಗಡೆ ಮಾತನಾಡಿ, ನಮ್ಮ ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರ, ರೈತರ ಪರವಾಗಿರುವ ಸರ್ಕಾರ, ಬಿಜೆಪಿ ಅವರು ಸುಳ್ಳಿಗೆ ಹೆಸರಾದವರು, ಇಲ್ಲಿವರೆಗೂ ಬಡವರಿಗೆ ಅನುಕೂಲವಾಗುವ ಒಂದು ಕೆಲಸ ಮಾಡಿಲ್ಲ, ನಾವು ನುಡಿದಂತೆ ನಡೆದಿದ್ದೇವೆ, ರಾಜ್ಯದ ಜನರಿಗೆ ನೀಡಿದ ಭರವಸೆಯಂತೆ 5 ಗ್ಯಾರಂಟಿ ಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ. ಎಲ್ಲ ವರ್ಗದವರಿಗೂ ನಮ್ಮ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡಿದ್ದೇವೆ. ಕಲ್ಯಾಣ ಕರ್ನಾಟಕಕ್ಕೆ ನಾನಾ ಅಭಿವೃದ್ದಿ ಕೆಲಸಗಳಿಗೆ 5 ಸಾವಿರ ಕೋಟಿ ಅನುದಾನ ಹರಿದು ಬಂದಿದೆ. ನಮ್ಮ ಸರ್ಕಾರದ ಸಾಧನೆಗಳನ್ನು ಮೇ.20 ರಂದು ಹೊಸಪೇಟೆಯಲ್ಲಿ ನಡೆಯಲಿರುವ ಸಾಧನ ಸಮಾವೇಶದಲ್ಲಿ ರಾಜ್ಯದ ಜನರ ಮುಂದಿಡುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ರಾಜೇಶ್ವರಿ ಸುಬ್ಬರಾಯಡು, ಬಿಆರ್ ಎಲ್ ಶ್ರೀನಿವಾಸ್, ನೂರು ಅಹ್ಮದ್, ಪೀ. ಗಾದೇಪ್ಪ, ರಾಮಾಂಜನೇಯ, ರಾಜಶೇಖರ್, ಯುವ ಘಟಕದ ಜಿಲ್ಲಾಧ್ಯಕ್ಷ ಶ್ರೀಕಾಂತ್, ನಾಗಭೂಷಣ್, ಸುಬ್ಬರಾಯಡು ಸೇರಿದಂತೆ ಇತರರಿದ್ದರು.
WhatsApp Group Join Now
Telegram Group Join Now
Share This Article