ಕೇಂದ್ರದ ಅನುದಾನ ಕರ್ನಾಟಕ ಸರ್ಕಾರ ಬಳಸಿಕೊಂಡಿಲ್ಲ: ಸಚಿವ ಪ್ರಹ್ಲಾದ ಜೋಶಿ

Ravi Talawar
ಕೇಂದ್ರದ ಅನುದಾನ ಕರ್ನಾಟಕ ಸರ್ಕಾರ ಬಳಸಿಕೊಂಡಿಲ್ಲ: ಸಚಿವ ಪ್ರಹ್ಲಾದ ಜೋಶಿ
WhatsApp Group Join Now
Telegram Group Join Now

ಬೆಂಗಳೂರು, ಮೇ 19:ಹಣಕಾಸು ನಿರ್ವಹಣೆಯಲ್ಲಿನ ತಮ್ಮ ಅಸಮರ್ಥತೆಯನ್ನು ಒಪ್ಪಿಕೊಳ್ಳುವ ಬದಲು, ಸಿಎಂ ಸಿದ್ದರಾಮಯ್ಯ ಮತ್ತು ಅವರ ಸರ್ಕಾರ ಕೇಂದ್ರದ ಮೇಲೆ ಆರೋಪ ಹೊರಿಸುತ್ತಲೇ ಇದ್ದಾರೆ. ತಮ್ಮ ಅಸಮರ್ಥತೆ ಮತ್ತು ಕಾಂಗ್ರೆಸ್ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿನ ವೈಫಲ್ಯವನ್ನು ಮುಚ್ಚಿಹಾಕಲು ಅವರು ಈ ರೀತಿ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ  ಪ್ರಲ್ಹಾದ್ ಜೋಶಿ ಹೇಳಿದ್ದಾರೆ

ತಮ್ಮ ಹಣಕಾಸು ನಿರ್ವಹಣೆಯ ಅಸಮರ್ಥತೆ ಮುಚ್ಚಿಹಾಕಲು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಜೋಶಿ ಟೀಕಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯ ಎಕ್ಸ್​​ನಲ್ಲಿ ಅಂಕಿಅಂಶ ಸಮೇತ ಜೋಶಿ ಮಾಹಿತಿ ನೀಡಿದ್ದು, ಕೇಂದ್ರದಿಂದ ಹಣ ಬಿಡುಗಡೆಯಾಗದ ಒಂದೇ ಒಂದು ಯೋಜನೆಯನ್ನು ಸಿದ್ದರಾಮಯ್ಯ ಹೆಸರಿಸಲಿ ನೋಡೋಣ ಎಂದು ಸವಾಲೆಸೆದಿದ್ದಾರೆ.\

ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ  ಆರೋಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ  ಅಂಕಿಅಂಶ ಸಮೇತ ತಿರುಗೇಟು ನೀಡಿದ್ದಾರೆ. ಕೇಂದ್ರ ಸರ್ಕಾರ ಕೊಟ್ಟ ಹಣವನ್ನು ಸರಿಯಾಗಿ ಬಳಸದೇ ಕರ್ನಾಟಕ ಮುಖ್ಯಮಂತ್ರಿಗಳು ವೃಥಾ ಆರೋಪ ಮಾಡುತ್ತಿದ್ದಾರೆ.

ಹಣಕಾಸು ನಿರ್ವಹಣೆಯಲ್ಲಿನ ತಮ್ಮ ಅಸಮರ್ಥತೆಯನ್ನು ಒಪ್ಪಿಕೊಳ್ಳುವ ಬದಲು, ಸಿಎಂ ಸಿದ್ದರಾಮಯ್ಯ ಮತ್ತು ಅವರ ಸರ್ಕಾರ ಕೇಂದ್ರದ ಮೇಲೆ ಆರೋಪ ಹೊರಿಸುತ್ತಲೇ ಇದ್ದಾರೆ. ತಮ್ಮ ಅಸಮರ್ಥತೆ ಮತ್ತು ಕಾಂಗ್ರೆಸ್ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿನ ವೈಫಲ್ಯವನ್ನು ಮುಚ್ಚಿಹಾಕಲು ಅವರು ಈ ರೀತಿ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

WhatsApp Group Join Now
Telegram Group Join Now
Share This Article