ಮಕ್ಕಳಾಗಲಿಲ್ಲ ಎಂದು ಅತ್ತೆಯೇ ಸೊಸೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ

Ravi Talawar
ಮಕ್ಕಳಾಗಲಿಲ್ಲ ಎಂದು ಅತ್ತೆಯೇ  ಸೊಸೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ
WhatsApp Group Join Now
Telegram Group Join Now

ಚಿಕ್ಕೋಡಿ (ಬೆಳಗಾವಿ) : ಸೊಸೆಗೆ ಮಕ್ಕಳಾಗಲಿಲ್ಲ ಎಂದು ಅತ್ತೆಯೇ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ಧಾರುಣ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಮಲಬಾದ್​ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೇಣುಕಾ ಸಂತೋಷ ಹೊನಕಾಂಡೆ (27) ಕೊಲೆಯಾದ ಮೃತ ದುರ್ದೈವಿ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆ ಪತಿ ಸಂತೋಷ ಹೊನಕಾಂಡೆ, ಮಾವ ಕಾಮಣ್ಣ ಹೊನಕಾಂಡೆ, ಅತ್ತೆ ಜಯಶ್ರೀ ಹೊನಕಾಂಡೆ ಎಂಬುವರನ್ನು ಅಥಣಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Share This Article