ಬೆಂಗಳೂರು, ಮೇ 20: ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರಲ್ಲೂ ಮೇ 26ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಬಾಗಲಕೋಟೆ, ಧಾರವಾಡ, ಹಾವೇರಿ, ಹಾಸನ, ಕೊಡಗಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಗದಗ,ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಟ್ಟಿನಲ್ಲಿ ಮೇ 26ರವರೆಗೆ ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ.
ಎಲ್ಲೆಲ್ಲಿ ಮಳೆಯಾಗಿದೆ? ಬೆಂಗಳೂರು ಜಿಕೆವಿಕೆ, ಚಾಮರಾಜನಗರ, ಬೆಂಗಳೂರು ನಗರ, ಟಿಜಿಹಳ್ಳಿ, ಕನಕಪುರ, ಹುನಗುಂದ, ನಾರಾಯಣಪುರದಲ್ಲಿ ಹೆಚ್ಚು ಮಳೆಯಾಗಿದೆ. ಹೊಸಕೋಟೆ, ಹೆಸರಘಟ್ಟ, ಕುಣಿಗಲ್, ಬಸವನ ಬಾಗೇವಾಡಿ, ಚಿತ್ತಾಪುರ, ಜೇವರ್ಗಿ, ನಲ್ವತವಾಡ, ಮಾಗಡಿ, ಎಲೆಕ್ಟ್ರಾನಿಕ್ ಸಿಟಿ, ಹಣಸಗಿ, ಬೆಳಗಾವಿ, ಕೆಂಭಾವಿ, ಕಕ್ಕೇರಿ, ಅಫ್ಜಲ್ಪುರ, ಚಿಂಚೋಳಿ, ಗದಗದಲ್ಲಿ ಮಳೆಯಾಗಿದೆ.