ರಣಮಳೆಗೆ ತತ್ತರಿಸಿದ್ದ ಕೊಡಗಿಗೆ ಮತ್ತೇ ಆತಂಕದ ಸ್ಥಿತಿ: 43 ಸ್ಥಳಗಳಿಗೆ ಅಪಾಯದ ಎಚ್ಚರಿಕೆ!

Ravi Talawar
ರಣಮಳೆಗೆ ತತ್ತರಿಸಿದ್ದ ಕೊಡಗಿಗೆ ಮತ್ತೇ ಆತಂಕದ ಸ್ಥಿತಿ: 43 ಸ್ಥಳಗಳಿಗೆ ಅಪಾಯದ ಎಚ್ಚರಿಕೆ!
WhatsApp Group Join Now
Telegram Group Join Now

ಕೊಡಗು: ಕಳೆದ ಎರಡು ವರ್ಷಗಳಲ್ಲಿ ಭಾರಿ ಸಮಸ್ಯೆ ಏನೂ ಆಗಿಲ್ಲ. ಆದರೆ, ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕೊಡಗಿನಲ್ಲಿ 43 ಪ್ರದೇಶಗಳು ಅಪಾಯಕಾರಿ ಎಂದು ಎಚ್ಚರಿಕೆ ನೀಡಲಾಗಿದೆ. ಜೊತೆಗೆ, ಹಟ್ಟಿಹೊಳೆ ಕಾವೇರಿ ನದಿ ಹಾಗೂ ಲಕ್ಷ್ಮಣ ತೀರ್ಥ ನದೀಯ ತಟದಲ್ಲಿ ಇರುವವರು ಎಚ್ಚರ ವಹಿಸಬೇಕು ಎಂದು ತಜ್ಞರು ಎಚ್ಚರಿಕೆ ನೀಡಿರುವುದಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ.

ಭಾರತೀಯ ಭೂಗರ್ಭ ಶಾಸ್ತ್ರಜ್ಞರು ಆಡಳಿತಕ್ಕೆ ಒಂದು ವರದಿ ಸಲ್ಲಿಸಿದ್ದು, ಇದು ಕೂಡ ಜನತೆಯ ಆತಂಕ ಹೆಚ್ಚಿಸಿದೆ. ಈ ಹಿಂದೆ ಪ್ರಾಕೃತಿಕ ವಿಕೋಪ ಸಂಭವಿಸಿದ್ದ ಸ್ಥಳದಲ್ಲೇ ಮತ್ತೆ ಅಪಾಯದ ಸಾಧ್ಯತೆ ಇದೆ ಎಂದು ಅವರು ವರದಿಯಲ್ಲಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ

ತಜ್ಞರ ವರದಿಯ ಬೆನ್ನಲ್ಲೇ ಕೊಡಗು ಜಿಲ್ಲಾಡಳಿತ ಕೂಡ ಈ ಬಾರಿಯ ಮಳೆಗಾಲವನ್ನು ಎದುರಿಸಲು ಸಿದ್ಧತೆ ಮಾಡಿದೆ. ತಜ್ಞರು ಹೇಳಿದ ಆ ಪ್ರದೇಶಗಳಲ್ಲಿ ಏನಾದರೂ ಬದಲಾವಣೆಗಳು ಕಾಣಿಸುತ್ತಿವೆಯಾ ಎಂದು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದೆ.

ತಜ್ಞರು ಎಚ್ಚರಿಕೆ ನೀಡಿರುವ ಪ್ರದೇಶಗಳಲ್ಲಿ ಅಗತ್ಯ ಸೇವೆಗಳು ಸುಲಭವಾಗಿ ಲಭ್ಯವರುವಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಪೊಲೀಸ್ ಇಲಾಖೆ, ಅಗ್ನಿಶಾಮಕ‌ ಸಿಬ್ಬಂದಿ, ನೋಡಲ್ ಅಧಿಕಾರಿಗಳು ಹಾಗೂ ಸ್ವಯಂ ಸೇವಕರನ್ನು ಈಗಲೇ ನೆಮಿಸಿಕೊಳ್ಳಲಾಗಿದೆ. ಜೊತೆಗೆ ಸಂಭಾವ್ಯ ಪ್ರವಾಹ ಎದುರಾಗುವ ಏರಿಯಾದ ಸುತ್ತ ಮುತ್ತ 100 ಕ್ಕೂ ಹೆಚ್ಚು ಆಶ್ರಯ ಕೇಂದ್ರಗಳನ್ನು ಆರಂಭಿಸಲು ಚಿಂತನೆ ನಡೆಸಿದ್ದು, ಎಲ್ಲಾ ಮೂಲಭೂತ ಸೌಕರ್ಯ ಸಿದ್ಧಪಡಿಸಿಕೊಳ್ಳಲಾಗಿದೆ. ಜನತೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.

WhatsApp Group Join Now
Telegram Group Join Now
Share This Article