ಬಳ್ಳಾರಿ ಮೇ 21 : ತಾಲೂಕಿನ ಮೋಕಾ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಮಕ್ಕಳ ತಜ್ಞ ವೈದ್ಯರಾದ ಡಾ ರೂಪ ಕೂಸಿನ ಮನೆ ಮಕ್ಕಳಿಗೆ ಆರೋಗ್ಯ ತಪಾಸಣೆ ಮಾಡಿದರು, ರಾಜ್ಯ ಸರ್ಕಾರ ಕೂಸಿನ ಮನೆ ಯೋಜನೆ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಅಡಿಯಲ್ಲಿ ಕೆಲಸ ಮಾಡುತ್ತಿರುವ ತಾಯಂದಿರ ಮಕ್ಕಳಿಗೆ ಆರೋಗ್ಯ ರಕ್ಷಣೆ, ಪೋಷಣೆ ಮತ್ತು ಸುರಕ್ಷತೆಯನ್ನು ಒದಗಿಸುವ ಗುರಿಯನ್ನು ಹೊಂದಿದ್ದು ರಾಷ್ಟ್ರೀಯ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರ ಮತ್ತು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವ ಏಳು ತಿಂಗಳಿಂದ ಮೂರು ವರ್ಷದೊಳಗಿನ ಮಗುವನ್ನು ಲಾಲನೆ-ಪಾಲನೆಗೆ ಮಾಡುವ ಯೋಜನೆ ಆಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮೋಕಾ ಕ್ಷೇತ್ರ ಅರೋಗ್ಯ ಶಿಕ್ಷಣ ಅಧಿಕಾರಿಗಳಾದ ಖುರ್ಶಿದ್ ಬೇಗಮ್, ಅರೋಗ್ಯ ನಿರೀಕ್ಷಣಾ ಅಧಿಕಾರಿಗಳಾದ ಮೊಹಮ್ಮದ್ ಇಶಾಕ್, ಗುರುಸಿದ್ದಪ್ಪ ಮತ್ತು ಕೂಸಿನ ಮನೆಗೆ ಸಿಬ್ಬಂದಿ ಉಪಸ್ಥಿತರಿದ್ದರು.