ಬಳ್ಳಾರಿ,ಮೇ.21.: ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಅಖಿಲ ಭಾರತ ಪ್ರತಿಭಟನೆ ಅಂಗವಾಗಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸರ್ಕಾರದ ೪ ಲೇಬರ್ ಕೋಡ್, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರೋಧಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಲೇಬರ್ ಕೋಡ್ ಪ್ರತಿಕೃತಿಯನ್ನು, ಹಾಗೂ ವಿಮೆಯಲ್ಲಿ ೧೦೦% ವಿದೇಶಿ ಬಂಡವಾಳದ ಪ್ರತಿಕೃತಿಯನ್ನು ದಹಿಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಜುಲೈ ೯, ೨೦೨೫ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಪೂರ್ವಭಾವಿಯಾಗಿ ಈ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಎಐಯುಟಿಯುಸಿಯ ಎ.ದೇವದಾಸ್, ಸಿಐಟಿಯುನ ಸತ್ಯಬಾಬು, ಹಿರಿಯ ಕಾರ್ಮಿಕ ಮುಖಂಡರಾದ ಟಿ.ಜಿ ವಿಠ್ಠಲ್, ಅಖಿಲ ಭಾರತ ವಿಮಾ ನೌಕರರ ಸಂಘದ ಸೂರ್ಯ ನಾರಾಯಣ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಶಾಂತಾ ಮಾತನಾಡಿದರು. ಎಐಯುಟಿಯುಸಿಯ ಆರ್ ಸೋಮಶೇಖರ ಗೌಡ, ಜಿ. ಸುರೇಶ್ ಉಪಸ್ಥಿತರಿದ್ದರು.
ಮುಖಂಡರುಗಳು ಮಾತನಾಡುತ್ತಾ “ಕೇಂದ್ರ ಸರ್ಕಾರ ವ್ಯಾಪಾರವನ್ನು ಸುಲಭ ಮಾಡುವ ಹೆಸರಿನಲ್ಲಿ ದುಡಿಯುವ ಜನರ ಮೇಲೆ ಗುಲಾಮಗಿರಿಯ ಷರತ್ತುಗಳನ್ನು ಹೇರುತ್ತಿದೆ. ಅವಿರತ ತ್ಯಾಗ ಬಲಿದಾನಗಳಿಂದ ಗಳಿಸಿದ ೨೯ ಕಾರ್ಮಿಕ ಕಾನೂನುಗಳನ್ನು ಕಿತ್ತು ಹಾಕಿ ಕಾರ್ಮಿಕ-ವಿರೋಧಿ ೪ ಲೇಬರ್ ಕೋಡ್ಗಳನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರವು ಅತ್ಯಂತ ಸಕ್ರಿಯವಾಗಿದೆ. ಲೇಬರ್ ಕೋಡ್ಗಳು ಕಾರ್ಮಿಕರ ಬಹುತೇಕ ಚಾಲ್ತಿಯಲ್ಲಿರುವ ಹಕ್ಕುಗಳನ್ನು ಕಸಿದುಕೊಳ್ಳುತ್ತವೆ. ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಇತ್ಯಾದಿ ಸೇರಿದಂತೆ ಮೂಲಭೂತ ಹಕ್ಕುಗಳು ಹಾಗೂ ಯೂನಿಯನ್ ಮಾಡುವ ಹಕ್ಕು, ಮನ್ನಣೆ, ಸಾಮೂಹಿಕ ಚೌಕಾಸಿ, ಅಂದೋಲನಗಳು ಮತ್ತು ಮುಷ್ಕರದ ಹಕ್ಕು ಸೇರಿದಂತೆ ಯಾವುದೇ ರೀತಿಯ ಸಾಮೂಹಿಕ ಪ್ರತಿಭಟನೆಯ ಹಕ್ಕುಗಳನ್ನು ಲೇಬರ್ ಕೋಡ್ಗಳು ಕಸಿದುಕೊಳ್ಳುತ್ತವೆ. ಎಂದರು.
ಮುಂದುವರೆದು “ ಆಗಿನ ಕಾಂಗ್ರೆಸ್ ಸರ್ಕಾರವು ಜಾಗತೀಕರಣ, ಖಾಸಗೀಕರಣ ಹಾಗೂ ಉದಾರೀಕರಣ ನೀತಿಗಳನ್ನು ಪ್ರಾರಂಭಿಸಿದ ಫಲವಾಗಿ ಕಾರ್ಮಿಕರ ಸಂಕಷ್ಟಗಳು ಇನ್ನಷ್ಟು ಹೆಚ್ಚಾದವು. ಪ್ರಸ್ತುತ ಕೇಂದ್ರ ಬಿಜೆಪಿ ಸರ್ಕಾರವು ಅತ್ಯಂತ ವೇಗವಾಗಿ ಈ ನೀತಿಗಳನ್ನು ಅನುಷ್ಠಾನಗೊಳಿಸುತ್ತಿರುವುದು ಅತ್ಯಂತ ಕಾರ್ಮಿಕ ವಿರೋಧಿ ಹಾಗೂ ಜನ ವಿರೋಧಿ ಕ್ರಮವಾಗಿದೆ. ಎಂದರು.
ಈ ಹಿನ್ನೆಲೆಯಲ್ಲಿ ದುಡಿಯುವ ಜನ ಇನ್ನಷ್ಟು ಸಂಘಟಿತರಾಗಿ ಹೋರಾಟ ತೀವ್ರಗೊಳಿಸುವ ಅವಶ್ಯಕತೆ ಇದೆ. ಜುಲೈ ೯ರಂದು ನಡೆಯುವ ಅಖಿಲ ಭಾರತ ಮುಷ್ಕರವನ್ನು ಯಶಸ್ವಿಗೊಳಿಸುವಂತೆ “ ಕರೆ ನೀಡಿದರು.
ಇನ್ನಿತರ ಕಾರ್ಮಿಕ ಮುಖಂಡರಾದ ಚೇತನ್, ಪಾರ್ವತಮ್ಮ, ಜಯಮ್ಮ, ನಾಗಮ್ಮ, ಲಕ್ಷ್ಮಿ ದೇವಿ, ರಮಾ ದೇವಿ ಮುಂತಾದವರು ಉಪಸ್ಥಿತರಿದ್ದರು.
ಬೇಡಿಕೆಗಳು: ೧.ಕಾರ್ಮಿಕ-ವಿರೋದಿ ಬಂಡವಾಳಶಾಹಿ ಪರ ೪ ಲೇಬರ್ ಕೋಡ್ಗಳನ್ನು ರದ್ದುಗೊಳಿಸಬೇಕು. ೨.ಸಾರ್ವಜನಿಕ ವಲಯಗಳ ಹಾಗೂ ಸರ್ಕಾರಿ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಿ.ರಾಷ್ಟ್ರೀಯ ನಗದೀಕರಣ ಯೋಜನೆ ರದ್ದುಗೊಳಿಸಬೇಕು, ೩. ವಿದ್ಯುತ್ ಕಾಯ್ದೆ ತಿದ್ದುಪಡಿ ಮಸೂದೆ ೨೦೨೩ ಹಿಂಪಡೆಯಿರಿ. ಸ್ಮಾರ್ಟ್ ಮೀಟರ್ ಅಳವಡಿಕೆ ನಿಲ್ಲಿಸಬೇಕು, ೪. ಕೆಲಸದ ಅವಧಿಯನ್ನು ಪ್ರಸ್ತುತದಲ್ಲಿರುವ ದಿನಕ್ಕೆ ೮ ಗಂಟೆ ಮತ್ತು ವಾರಕ್ಕೆ ೪೮ ಗಂಟೆ ಮಿತಿಯನ್ನು ಖಾತ್ರಿಗೊಳಿಸಿ. ಮಹಿಳೆಯರಿU ರಾತ್ರಿ ಪಾಳಿ ಅವಕಾಶ ನೀಡುವ ಆದೇಶವನ್ನು ಹಿಂಪಡೆಯಬೇಕು. ೫. ಓPS / UPS ಬೇಡ. ಎಲ್ಲರಿಗೂ ಔPS ಜಾರಿ ಮಾಡಿ.
೬. ಎಲ್ಲಾ ಕಾರ್ಮಿಕರಿಗೆ ಕನಿಷ್ಠ ವೇತನ ರೂ.೩೬,೦೦೦ ನಿಗದಿಪಡಿಸಬೇಕು. ೭. ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಬೇಕು. ಎಲ್ಲಾ ಗುತ್ತಿಗೆ-ಹೊರಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು. ಅಲ್ಲಿಯವರೆಗೆ
ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಬೇಕು. ೮. ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರು ಸೇರಿದಂತೆ ಎಲ್ಲಾ ಯೋಜನಾ ಕಾರ್ಯಕರ್ತರ ಸೇವೆಗಳನ್ನು ಖಾಯಂಗೊಳಿಸಿ ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ. ೯. ವಲಸೆ ಕಾರ್ಮಿಕರಿಗೆ ಸುರಕ್ಷತೆ, ಭದ್ರತೆ ಹಾಗೂ ಖಾಯಂ ಉದ್ಯೋಗ ನೀಡಬೇಕು. ೧೦.ಕಾರ್ಮಿಕ ಸಂಘ ರಚಿಸುವ ಪ್ರಜಾತಾಂತ್ರಿಕ ಹಕ್ಕುಗಳನ್ನು ಖಾತ್ರಿ ಪಡಿಸಿ.
೧೧. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ತುರ್ತು ಕ್ರಮ ಕೈಗೊಳ್ಳಬೇಕು. ೧೨. ಗಿಗ್ ಮತ್ತು ಪ್ಲಾಟ್ಫಾರಂ ಕೆಲಸಗಾರರನ್ನು ಕಾರ್ಮಿಕರೆಂದು ಪರಿಗಣಿಸಿ ಎಲ್ಲಾ
ಕಾರ್ಮಿಕ ಕಾಯ್ದೆಗಳನ್ನು ಅವರಿಗೆ ಅನ್ವಯಿಸುವಂತೆ ಕ್ರಮಕೈಗೊಳ್ಳಬೇಕು. ೧೩. ಎಲ್ಲಾ ಅಸಂಘಟಿತ ವಲಯದ ಕಾರ್ಮಿಕರಿಗೆ ಕಲ್ಯಾಣ ಮಂಡಳಿಗಳನ್ನು ಸ್ಥಾಪಿಸಿ, ಸಾಮಾಜಿಕ ಭದ್ರತೆ ಸವಲತ್ತುಗಳನ್ನು
ಖಾತ್ರಿಗೊಳಿಸಬೇಕು. ೧೪. ಎಲ್ಲಾ ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ, ಉದ್ಯೋಗದ ಹಕ್ಕನ್ನು ಮೂಲಭೂತ ಸಾಂವಿಧಾನಿಕ ಹಕ್ಕನ್ನಾಗಿ ಮಾಡಬೇಕು .