ಯಶ್ ತಾಯಿ ನಿರ್ಮಾಣದ ಕೊತ್ತಲವಾಡಿ  ಟೀಸರ್ ರಿಲೀಸ್  ಮಾಡಿದ ಶರಣ್

Ravi Talawar
ಯಶ್ ತಾಯಿ ನಿರ್ಮಾಣದ ಕೊತ್ತಲವಾಡಿ  ಟೀಸರ್ ರಿಲೀಸ್  ಮಾಡಿದ ಶರಣ್
WhatsApp Group Join Now
Telegram Group Join Now
     ರಾಕಿಂಗ್‌ ಸ್ಟಾರ್‌ ಯಶ್‌ ಅವರ ತಾಯಿ ತಮ್ಮದೇ ಪಿಎ ಪ್ರೊಡಕ್ಷನ್ಸ್ ಸ್ಥಾಪಿಸಿದ್ದು, ಈ ನಿರ್ಮಾಣ ಸಂಸ್ಥೆಯಡಿ ‘ಕೊತ್ತಲವಾಡಿ’ ಎಂಬ ಚೊಚ್ಚಲ ಚಿತ್ರ ತಯಾರಾಗಿದೆ. ಈ
ಚಿತ್ರದ ಟೀಸರ್‌ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಿತು.
     ಕಾರ್ಯಕ್ರಮದಲ್ಲಿ ಯಶ್ ತಾಯಿ,  ನಿರ್ಮಾಪಕಿ ಪುಷ್ಪ ಮತ್ತು ತಂದೆ ಅರುಣ್‌ ಕುಮಾರ್‌, ನಟ ಪೃಥ್ವಿ ಅಂಬರ್‌, ನಟಿ ಕಾವ್ಯ,  ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ, ನಿರ್ದೇಶಕ ಶ್ರೀರಾಜ್ ಭಾಗಿಯಾಗಿದ್ದರು. ನಟ ಶರಣ್‌ ವಿಶೇಷ ಅತಿಥಿಯಾಗಿ ಆಗಮಿಸಿ ಟೀಸರ್‌ ಅನಾವರಣ ಮಾಡಿದರು.
    ಶರಣ್‌ ಮಾತನಾಡಿ “ಒಂದು ಹೊಸ ಶುರುವಾತಿನ ವೈಬ್‌ ಇಲ್ಲಿ ಕಾಣಿಸುತ್ತಿದೆ. ನಮ್ಮ ಯಶಸ್ಸಿನ ಗುಟ್ಟು ಈ ಒಗ್ಗಟ್ಟಿನ ಸಾಕ್ಷಿ, ಈ ಚಿತ್ರಕ್ಕೆ ಕೆಲಸ ಮಾಡಿರುವ ಮುಖದಲ್ಲಿ ಕುತೂಹಲ, ಪಾಸಿಟಿವ್‌ ಎನರ್ಜಿ, ಭಕ್ತಿ, ಆತ್ಮೀಯತೆ, ಪ್ರೀತಿ ಇದೆ. ಇಷ್ಟು ಸಾಕು ಒಂದು ಯಶಸ್ವಿಗೆ. ಈ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಕೊಟ್ಟಿದ್ದಕ್ಕೆ ಅಮ್ಮನಿಗೆ ಧನ್ಯವಾದ. ಇಷ್ಟು ವರ್ಷದ ಕನಸನ್ನು ಲೋಕಾರ್ಪಣೆ ಮಾಡುತ್ತಿರುವ ಖುಷಿ ಚಿತ್ರತಂಡದ ಮುಖದಲ್ಲಿ ಕಾಣಿಸುತ್ತದೆ. ಇಡೀ ತಂಡಕ್ಕೆ ದೊಡ್ಡ ಯಶಸ್ಸು ಸಿಗಲಿ” ಎಂದು ಶುಭ ಹಾರೈಸಿದರು.
     ನಿರ್ಮಾಪಕಿ ಪುಷ್ಪ ಅರುಣ್‌ ಕುಮಾರ್‌  “ನಮ್ಮ ಕೆಲಸ ಮಾತನಾಡಬೇಕು. ನಾವು ಮಾತನಾಡಬಾರದು. ಯಶ್‌ ಮನೆ ಸಿನಿಮಾ ಅಂದ್ರೆ ಇಡೀ ದೇಶ ನೋಡುತ್ತದೆ. ಅದಕ್ಕೆ ತಕ್ಕ ರೀತಿ ಮಾಡಿ. ಇಲ್ಲಾಂದ್ರೆ ಮಾಡಬೇಡಿ. ಸಿನಿಮಾಕ್ಕೆ ಬೇಕಾದ್ದು  ಎಲ್ಲಾ ನಿಮಗೆ ಕೊಡುತ್ತೇವೆ ಎಂದಿದ್ದೆವು. ಆರ್ಟಿಸ್ಟ್‌ ಯಾರು ಬೇಕು. ಎಲ್ಲಾ ಸೆಲೆಕ್ಷನ್‌ ಅವರೇ ಮಾಡಿದ್ದಾರೆ. ನಮ್ಮ ಬ್ಯಾನರ್‌ ಯಾವುದು? ತಿಳಿದು ಕೆಲಸ ಮಾಡಬೇಕು ಎಲ್ಲವನ್ನೂ ಯಶ್‌ ಗೆ ಉತ್ತರ ಕೊಡಬೇಕು. ಯಶ್‌ ನಿಂದ ನಾವು ಏನು ಕಲಿತಿದ್ದೇವೆ ಎಂದರೆ ಸಿನಿಮಾ ಏನು ಕೇಳುತ್ತದೆಯೋ ಅದು ಕೊಡಬೇಕು.ಸಿನಿಮಾಗೆ ಮೋಸ ಮಾಡಬಾರದು ಎನ್ನುವುದಾಗಿದೆ. 10ರೂಪಾಯಿ ಜಾಸ್ತಿಯಾಗಲಿ. ಕ್ವಾಲಿಟಿ ಕೊಡಬೇಕು. ಕಥೆ ಮಾತನಾಡಬೇಕು. ಅದೇ ರೀತಿ ನೀವು ಮಾಡುತ್ತೇವೆ ಎಂದರೆ ನಿಮಗೆ ಕೊಡುತ್ತೇವೆ ಎಂದು ಹೇಳಿದ್ದೆ.
ಈಗ ಸಿನಿಮಾ ಸಿದ್ದವಾಗಿದೆ ಆಡಿಯನ್ಸ್‌ ರಿಸಲ್ಟ್‌ ಗೆ ನಾವು ಕಾಯುತ್ತೇವೆ” ಎಂದು ಹೇಳಿದರು.
     ಅರುಣ್‌ ಕುಮಾರ್‌  “ನಿನಗೆ ಖುಷಿಯಾದರೆ ಸಿನಿಮಾ ಮಾಡಮ್ಮ. ನಾನು ರೈತ. ನೀನು ಏನ್‌ ಬೇಕಾದರೂ ಮಾಡು ಎಂದು ಪತ್ನಿಗೆ ಬೆಂಬಲವಾಗಿದ್ದೇನೆ” ಎಂದು ತಿಳಿಸಿದರು.
     ನಟ ಪೃಥ್ವಿ ಅಂಬರ್‌ “ರಾಜು ಸರ್‌ ನನಗೆ ಮೊದಲಿನಿಂದ ಪರಿಚಯ. ನನಗೆ ಅವರು ಹೇಳಿರುವ ಎರಡನೇ ಕಥೆ. ಹಳ್ಳಿಯ ಸೊಡಗಿರುವ, ಹಳ್ಳಿಯ ಮುಗ್ದ, ಪವರ್‌ ಫುಲ್‌ ಸ್ಟ್ರಾಂಗ್‌ ಕ್ಯಾರೆಕ್ಟರ್‌ ಪ್ಲೇ ಮಾಡಬೇಕು ಎಂಬ ಮನಸ್ಸು ಇತ್ತು. ಎಲ್ಲರೂ ಚೆನ್ನಾಗಿ ಪಾತ್ರ ಮಾಡಿದ್ದಾರೆ. ಸಿನಿಮಾ ಮುಗಿದ್ರು ಪ್ರೊಡ್ಯೂಸರ್‌ ಯಾರು ಎಂದು ಗೊತ್ತಿರಲಿಲ್ಲ. ಪ್ರೊಡಕ್ಷನ್‌ ಹೌಸ್‌ ಮೀಟ್‌ ಮಾಡೋಣಾ ಎಂದು ರಾಜು ಸರ್‌ ಹೇಳುತ್ತಿದ್ದರು. ಮ್ಯಾಮ್‌ ಹಾಸನ್‌ ಮನೆಗೆ ಹೋದೆವು. ಮೀಟಿಂಗ್‌ ಮುಗಿಸಿ ಹೊರಟ ಬಳಿಕ ಮ್ಯಾಮ್‌ ಕಾಲಿಗೆ ಬಿದ್ದಾಗ ನನ್ನ ಮಗನಿಗಿಂತ ಚೆನ್ನಾಗಿ ಬೆಳೆಯಪ್ಪ ಎಂದರು. ಮ್ಯಾಮ್‌ ಬ್ರ್ಯಾಗ್ರೌಂಡ್‌ ಇಲ್ಲದವರ ಜೊತೆ ನಿಲ್ಲುತ್ತಾರೆ ಎಂಬ ನಂಬಿಕೆ ಇದೆ. ಸಿನಿಮಾ ಕಥೆಗೆ ಏನೋ ಬೇಕು ಎಲ್ಲವನ್ನೂ ಕೊಟ್ಟಿದ್ದಾರೆ. ಬಹಳ ಪ್ರೀತಿಯಿಂದ ಎಲ್ಲರೂ ಈ ಸಿನಿಮಾಗೆ ಕೆಲಸ ಮಾಡಿದ್ದಾರೆ” ಎಂದು ಹೇಳಿದರು.
     ನಿರ್ದೇಶಕ ಶ್ರೀರಾಜ್‌ “ನನಗೆ ಮೊದಲ ಬಾರಿಗೆ ಅವಕಾಶ ಕೊಟ್ಟಿರುವುದಕ್ಕೆ ಅಪ್ಪಾಜಿ-ಅಮ್ಮನಿಗೆ ಧನ್ಯವಾದ. ಅಮ್ಮ ಕಥೆ ಜಡ್ಟ್‌ ಮೆಂಟ್‌ ಚೆನ್ನಾಗಿ ಮಾತನಾಡುತ್ತಾರೆ. ನಾನು ಸಿನಿಮಾ ಮಾಡುವುದು ನನಗೆ ನಿನಗೆ ಮಾತ್ರ ಗೊತ್ತಿರಬೇಕು. ಯಾರಿಗೂ ಗೊತ್ತಾಗಬಾರದು ಎಂದು ಹೇಳಿದರು. ‘ಕೊತ್ತಲವಾಡಿ’ ಒನ್‌ ಲೈನ್‌ ಕಥೆ ಹೇಳಿದೆ ಅವರಿಗೆ ಇಷ್ಟವಾಯ್ತು. ಅದಕ್ಕೆ ಓಂಕಾರ ಹಾಕಿದರು. ಕಥೆ ಬರೆಯೋದಿಕ್ಕೆ ಎಂಟು ತಿಂಗಳು ಟೈಮ್‌ ತೆಗೆದುಕೊಂಡೆ. ಕಥೆ ಪೂರ್ತಿಯಾದಾಗ ಬಾ ಎಂದಿದ್ದರು. ಅಮ್ಮನಿಗೆ ಪೂರ್ತಿಯಾಗಿ ಕಥೆ ಹೇಳಿದೆ ಅವರಿಗೆ ಇಷ್ಟವಾಯ್ತು. ಅಲ್ಲಿಂದ ಈ ಜರ್ನಿ ಶುರುವಾಯ್ತು” ಎಂದರು. ಹಿರಿಯ ನಿರ್ದೇಶಕರಾದ ಕೆವಿ ರಾಜು, ರವಿಶ್ರೀವತ್ಸ ಗರಡಿಯಲ್ಲಿ ಕೆಲಸ ಮಾಡಿರುವ ಶ್ರೀರಾಜ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೆಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.
     ಇಷ್ಟು ದಿನ ರೋಸ್‌ ಹಿಡಿಯುತ್ತಿದ್ದ ಪೃಥ್ವಿ ಈಗ ಕಂಪ್ಲೀಟ್‌ ರಗಡ್‌ ಹಾಗೂ ಮಾಸ್‌ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಕೊತ್ತಲವಾಡಿ’ ಎಂಬ ಹಳ್ಳಿಯಲ್ಲಿ ನಡೆಯುವ ಕಥೆಯನ್ನು ನಿರ್ದೇಶಕ ಶ್ರೀರಾಜ್‌ ಹೇಳ ಹೊರಟಿದ್ದಾರೆ.
     ಪಿಎ  ಪ್ರೊಡಕ್ಷನ್ಸ್ ಪ್ರಮುಖ ಉದ್ದೇಶ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕೆಂಬ ನಿಟ್ಟಿನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ. ಅದರಂತೆ ಕೊತ್ತಲವಾಡಿ ಚಿತ್ರದಲ್ಲಿಯೂ ಹೊಸ ಪ್ರತಿಭೆಗಳಿಗೆ ಅವಕಾಶ ದೊರೆತಿದೆ. ಯುವ ನಿರ್ದೇಶಕರ ಜೊತೆಗೆ ಹಿನ್ನೆಲೆ ಸಂಗೀತ ಕೊಟ್ಟಿರುವ ಅಭಿನಂದನ್ ಕಶ್ಯಪ್, ಸಾಹಸ ನಿರ್ದೇಶಕ ಸಾಗರ್ ಕೂಡ ಹೊಸಬರೇ.
ಕಾರ್ತಿಕ್ ಎಸ್ ಕ್ಯಾಮೆರಾ ವರ್ಕ್, ರಾಮಿಸೆಟ್ಟಿ ಪವನ್ ಸಂಕಲನ,  ರಘು ನಿಡುವಳ್ಳಿ ಸಂಭಾಷಣೆ, ಡಾ.ವಿ.ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್ ಹಾಗೂ ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ‘ಕೊತ್ತಲವಾಡಿ’ ಚಿತ್ರಕ್ಕಿದ.
WhatsApp Group Join Now
Telegram Group Join Now
Share This Article