ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ಅವಧಿ ವಿಸ್ತರಣೆ

Ravi Talawar
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ಅವಧಿ ವಿಸ್ತರಣೆ
WhatsApp Group Join Now
Telegram Group Join Now
ಬಳ್ಳಾರಿ,ಮೇ 24ಸರ್ಕಾರದ ಆದೇಶ ದಿನಾಂಕ 2024 ನೇ ನವೆಂಬರ್ 12 ರಲ್ಲಿ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ಸಲ್ಲಿಸಲು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಡಾ: ಹೆಚ್.ಎನ್. ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿರುತ್ತದೆ.
ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು (Emperical Data) ಸಂಗ್ರಹಿಸಲು ಹೊಸದಾದ ಸಮೀಕ್ಷೆಯನ್ನು ನಡೆಸಲು ದಿನಾಂಕ: 27-03-2025 ರ ಆಯೋಗದ ಮಧ್ಯಂತರ ವರದಿಯಲ್ಲಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾದ ಹಿನ್ನೆಲೆಯಲ್ಲಿ ಸಮೀಕ್ಷೆಯನ್ನು ದಿನಾಂಕ: 05-05-2025 ರಿಂದ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವುದರ ಮೂಲಕ ರಾಜ್ಯಾದ್ಯಂತ ಈಗಾಗಲೇ ಪ್ರಾರಂಭಿಸಲಾಗಿರುತ್ತದೆ.
ಜಿಲ್ಲಾ ವ್ಯಾಪ್ತಿಯ ವಲಯಗಳಲ್ಲಿ ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಕಾರ್ಯವು ಇನ್ನೂ ಪ್ರಗತಿಯಾಗಬೇಕಾಗಿರುವುದರಿಂದ, ಮಳೆ/ಹವಾಮಾನ ವೈಪರೀತ್ಯ ಕಾರಣಗಳಿಂದಾಗಿ, ಅನೇಕ ಪರಿಶಿಷ್ಟ ಜಾತಿ ಸಂಘಗಳಿಂದ ಕೋರಿಕೆಯ ಮೇರೆಗೆ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲು ಅನುವಾಗುವಂತೆ ದಿನಾಂಕವನ್ನು ವಿಸ್ತರಿಸಲು ನಿರ್ಣಯಿಸಲಾಗಿದೆ.
ಮನೆ-ಮನೆ ಭೇಟಿ ನೀಡಿ ಸಮೀಕ್ಷೆಯು ದಿನಾಂಕ:26-05-2025 ರಿಂದ 29-05-2025 ರವರೆಗೆ ವಿಸ್ತರಿಸಲಾಗಿದೆ. ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) – 03 ದಿನಗಳ ಕಾಲ – ಮೇ 30, 31 ಹಾಗೂ 01 ನೇ ಜೂನ್ -2025 ರವರೆಗೆ ಮರು ನಿಗದಿಪಡಿಸಲಾಗಿದೆ ಮತ್ತು ಆನ್ ಲೈನ್ ಮೂಲಕ ಸ್ವಯಂ ಘೋಷಣೆ- ದಿನಾಂಕ: 01-06-2025 ರವರೆಗೆ ಮುಂದುವರೆಯಲಿದೆ ಎಂದು ಏಕ ಸದಸ್ಯ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article