ಬೆಂಗಳೂರು, ಜೂನ್ 7: ಆರ್ಸಿಬಿ ತಂಡ ಐಪಿಎಲ್ ಟ್ರೋಪಿ ಗೆದ್ದ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿಗೆ ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11ಮಂದಿ ಸಾವಿಗೀಡಾಗಿರುವ ದುರಂತ ರಾಜ್ಯಾದ್ಯಂತ ಕೋಲಾಹಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಬೆಂಗಳೂರು ಪೊಲೀಸ್ ಆಯುಕ್ತರು ಸೇರಿದಂತೆ ಹಲವರನ್ನು ಸರ್ಕಾರ ಅಮಾನತು ಮಾಡಿತ್ತು. ಇದೀಗ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಶಂಕರ್ ನೈತಿಕ ಹೊಣೆ ಹೊತ್ತು ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕೆಎಸ್ಸಿಎ ಖಜಾಂಚಿ ಜೈರಾಮ್ ಸಹ ರಾಜೀನಾಮೆ ನೀಡಿದ್ದಾರೆ. ಕೆಎಸ್ಸಿಎ ಅಧ್ಯಕ್ಷರಿಗೆ ಇಬ್ಬರೂ ಶುಕ್ರವಾರ ರಾತ್ರಿ ರಾಜೀನಾಮೆ ನೀಡಿರುವುದು ತಿಳಿದು ಬಂದಿದೆ.
ಪದಾಧಿಕಾರಿಗಳ ಆಕ್ರೋಶದ ಹಿನ್ನೆಲೆಯಲ್ಲಿ ಶಂಕರ್, ಜೈರಾಮ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಪದಾಧಿಕಾರಿಗಳ ಒತ್ತಡಕ್ಕೆ ಮಣಿದು ರಾಜೀನಾಮೆ ನೀಡಿದ್ದಾರೆ. ಹೈಕೋರ್ಟ್ ರಿಲೀಫ್ ಕೊಟ್ಟ ನಂತರ ಬ್ರಿಜೇಶ್ ಪಾಟೀಲ್ ಸಭೆ ನಡೆಸಿ ರಾಜೀನಾಮೆಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ತೆರವುಗೊಂಡ ಸ್ಥಾನಕ್ಕೆ ತಾತ್ಕಲಿಕವಾಗಿ ಜಂಟಿ ಕಾರ್ಯದರ್ಶಿ ಶಾವೀರ್ ತಾರಪೂರ್ ಅವರನ್ನು ನೇಮಕ ಮಾಡಲಾಗಿದೆ.