ಬೆಂಗಳೂರು, ಜೂನ್ 10: ಕಾಲ್ತುಳಿತ ದುರಂತ ಇಡೀ ದೇಶವೇ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿತ್ತು. ಆರ್ಸಿಬಿ ಗೆದ್ದ ಸಂಭ್ರಮದಲ್ಲಿ ಬಂದಿದ್ದ ಅಭಿಮಾನಿಗಳ ಪೈಕಿ 11 ಜನ ಉಸಿರು ಗಟ್ಟಿ ಸತ್ತು ಹೋಗಿದ್ದರು. ಇದೇ ಘೋರ, ರಾಜ್ಯ ಸರ್ಕಾರಕ್ಕೆ ದೊಡ್ಡ ಇಕ್ಕಟ್ಟಿಗೆ ಸಿಲುಕಿಸಿದೆ. ತನಿಖೆ ನಡೆಯುತ್ತಿರುವ ಹೊತ್ತಲ್ಲೇ ವಿಪಕ್ಷಗಳ ದಾಳಿ ಕೂಡ ಗಾಯದ ಮೇಲೆ ಬರೆ ಎಳೆದಂತಾಗಿದೆ. ಜೊತೆಗೆ ರಾಷ್ಟ್ರಮಟ್ಟದಲ್ಲೂ ಸರ್ಕಾರಕ್ಕೆ ಆರ್ಸಿಬಿ ಕಾಲ್ತುಳಿತ ಕಪ್ಪು ಚುಕ್ಕೆಯಾಗಿದೆ. ಇದೇ ದುರ್ಘಟನೇಗೀಗ ಕೈ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ್ದು, ವರಿಷ್ಠರ ಬುಲಾವ್ ಬೆನ್ನಲ್ಲೇ ಇಂದು ಬೆಳಿಗ್ಗೆ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.