ಏರ್​ ಇಂಡಿಯಾ ವಿಮಾನ ದುರಂತ: ಪವಾಡ ಸದೃಶ ರೀತಿಯಲ್ಲಿ ಓರ್ವ ಪ್ರಯಾಣಿಕ ಬಚಾವ್

Ravi Talawar
ಏರ್​ ಇಂಡಿಯಾ ವಿಮಾನ ದುರಂತ: ಪವಾಡ ಸದೃಶ ರೀತಿಯಲ್ಲಿ ಓರ್ವ ಪ್ರಯಾಣಿಕ ಬಚಾವ್
WhatsApp Group Join Now
Telegram Group Join Now

ಅಹಮದಾಬಾದ್: ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 242 ಪ್ರಯಾಣಿಕರ ಪೈಕಿ ಓರ್ವ ಪವಾಡಸದೃಶವಾಗಿ ಸಾವಿನ ದವಡೆಯಿಂದ ಪಾರಾಗಿರುವ ಮಾಹಿತಿ ಲಭ್ಯವಾಗಿದೆ. ಅಹಮದಾಬಾದ್​ನಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಿ ನಗರದಲ್ಲಿರುವ ಬಿಜೆ ಮೆಡಿಕಲ್​ ಕಾಲೇಜಿನ ಹಾಸ್ಟೆಲ್​ ಕಟ್ಟಡದ ಮೇಲೆ ಏಕಾಏಕಿ ಪತನಗೊಂಡಿದ್ದು, ದುರಂತಕ್ಕೀಡಾದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಪೈಕಿ ಓರ್ವ ಪವಾಡಸದೃಶವಾಗಿ ಸಾವಿನ ದವಡೆಯಿಂದ ಪಾರಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್.ಮಲಿಕ್ ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ದೂರವಾಣಿ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, “ಸೀಟ್​ ನಂಬರ್​ 11A ನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಸಾವಿನ ದವಡೆಯಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಸಾವಿನ ಸಂಖ್ಯೆಯ ಬಗ್ಗೆ ಸದ್ಯಕ್ಕೆ ಏನನ್ನೂ ಹೇಳಲು ಸಾಧ್ಯವಿಲ್ಲ. ವಿಮಾನವು ವಸತಿ ಪ್ರದೇಶದಲ್ಲಿ ಅಪಘಾತಕ್ಕೀಡಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು” ಎಂದು ಹೇಳಿದ್ದಾರೆ.

ಪವಾಡಸದೃಶವಾಗಿ ಬದುಕುಳಿದ ಪ್ರಯಾಣಿಕರನ್ನು ಬ್ರಿಟಿಷ್ ಪ್ರಜೆ ವಿಶ್ವಸ್‌ಕುಮಾರ್ ರಮೇಶ್ ಎಂದು ಗುರುತಿಸಲಾಗಿದೆ. ಮುಖ ಮತ್ತು ಇತರಡೆ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೃಶ್ಯಗಳು ಕಂಡು ಬಂದಿವೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ಘಟನಾ ಸ್ಥಳಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪರಿಸ್ಥಿತಿಯನ್ನು ಅವಲೋಕಿಸಿದರು. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಮತ್ತು ಗುಜರಾತ್ ಗೃಹ ಸಚಿವ ಹರ್ಷ ಸಾಂಘವಿ ಕೂಡ ಅವರೊಂದಿಗೆ ಇದ್ದರು.

WhatsApp Group Join Now
Telegram Group Join Now
Share This Article