ಬೆಂಗಳೂರು, ಜೂನ್ 16: ಬೆಂಗಳೂರಿನ ಕುಂಬಳಗೋಡು, ಕಲಾಸಿಪಾಳ್ಯ ಮತ್ತು ರಾಜರಾಜೇಶ್ವರಿ ನಗರದಲ್ಲಿ ಇರುವ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಸ್ಥಳೀಯ ಪೋಲಿಸರು ತಕ್ಷಣವೇ ಶಾಲೆಗಳಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹೈದರಾಬಾದ್ನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೊಡಿಸಬೇಕು. ಇಲ್ಲವಾದಲ್ಲಿ ಬಾಂಬ್ ಸ್ಫೋಟಿಸುತ್ತೇವೆ ಎಂದು ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.