ಧಾರವಾಡ : ಧಾರವಾಡ ಜಿಲ್ಲೆಯ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮುಖ್ಯ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಜೂನ್ 21, 2025 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2971590 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.