ಮೈಸೂರು: ಶಾಲಾ ವಾಹನದ ಟೈರ್ ಪಂಚರ್ ಆದ ಕಾರಣ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದು, 16 ಮಕ್ಕಳಿಗೆ ಗಾಯಗಳಾಗಿದೆ. ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಬ್ಬನಕುಪ್ಪೆ ಗ್ರಾಮದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ವಾಹನವು ಹಳ್ಳಕ್ಕೆ ಬಿದ್ದಿದೆ.
ಬುಧವಾರ (ಇಂದು) ಬೆಳಗ್ಗೆ ಪಿರಿಯಾಪಟ್ಟಣ ಬಳಿಯ ಕಂಪಲಪುರದ ಖಾಸಗಿ ಶಾಲೆಯ ವ್ಯಾನ್ ವಿವಿಧ ಗ್ರಾಮಗಳಿಂದ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೊರಟಿತ್ತು. ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.
ಗಾಯಗೊಂಡ ಮಕ್ಕಳಿಗೆ ಹುಣಸೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಹಾಗೂ ಗ್ರಾಮಸ್ಥರು ಆಗಮಿಸಿ ಮಕ್ಕಳನ್ನು ಆಸ್ಪತ್ರೆಗೆ ಸೇರಿಸಲು ನೆರವಾದರು.