ಸರ್ಕಾರಿ ಪಾಲಿಟೆಕ್ನಿಕ್ ಡಿಪ್ಲೋಮಾ ಪ್ರಥಮ ವರ್ಷಕ್ಕೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Pratibha Boi
WhatsApp Group Join Now
Telegram Group Join Now

ಬಳ್ಳಾರಿ,ಜೂ.18 ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2025-26ನೇ ಸಾಲಿಗೆ ಪೋಸ್ಟ್ ಡಿಪ್ಲೋಮಾ ಇಂಡಸ್ಟಿçಯಲ್ ಸೇಫ್ಟಿ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಕಾಲೇಜಿನಲ್ಲಿ ಪಡೆದುಕೊಂಡು ಭರ್ತಿ ಮಾಡಿದ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಇದೇ ಪಾಲಿಟೆಕ್ನಿಕ್ ಕಾಲೇಜ್‌ನ ಪ್ರಾಂಶುಪಾಲರ ಕಚೇರಿಗೆ ಜೂನ್ 25 ಸಂಜೆ 05 ಗಂಟೆಯೊಳಗೆ ಸಲ್ಲಿಸಬಹುದು.
ಜೂನ್ 26 ರಂದು ಬೆಳಿಗ್ಗೆ 11 ಗಂಟೆಗೆ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟ, ಅಂದು ಸಂಜೆ 03 ರ ವರೆಗೆ ತಿದ್ದುಪಡಿಗೆ ಅವಕಾಶ, ಸಂಜೆ 05 ಗಂಟೆಯವರೆಗೆ ಅಂತಿಮ ಮೆರಿಟ್ ಪಟ್ಟಿ ಪ್ರಕಟಿಸಲಾಗುವುದು. ಜೂನ್ 27 ರಿಂದ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ನ  ಪ್ರಾಚಾರ್ಯರ ಕಚೇರಿ ಅಥವಾ ದೂ.08392-242228 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಪಾಲಿಟೆಕ್ನಿಕ್ ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article