ಬಳ್ಳಾರಿ18.: ಪ್ರಸಕ್ತ ವರ್ಷಬಳ್ಳಾರಿಯಲ್ಲಿ ನಡೆಯಲಿರುವ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡ ಸಂಸ್ಕೃತಿ ಇಲಾಖೆಯ ವಾರ್ಷಿಕ ಕ್ರಿಯೆ ಯೋಜನೆಯಲ್ಲಿ ಈಗಾಗಲೇ 10 ಕೋಟಿ ರೂ. ಗಳನ್ನು ಮೀಸಲಿಸಿದ್ದು, ಈ ಹಿಂದೆ ನಡೆದಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಖರ್ಚ ವೆಚ್ಚಗಳ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ ಅಂದಾಜು 40 ಕೋಟಿ ರೂ. ಅನುದಾನದ ಅವಶ್ಯಕತೆ ಇದ್ದು, ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಬಿಡುಗಡೆ ಮಾಡಿರುವ ಅನುದಾನಕ್ಕಿಂತ 30 ಕೋಟಿ ರೂ. ಹೆಚ್ಚುವರಿ ಅನುದಾನ ನೀಡಬೇಕು ಎಂದು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಅವರಿಗೆ ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನಿಷ್ಠಿ ರುದ್ರಪ್ಪ ಅವರ ನೇತೃತ್ವದಲ್ಲಿ ಮಂಗಳವಾರ ಮನವಿ ಸಲ್ಲಿಸಲಾಯಿತು. ಕೊಪ್ಪಳ ಜಿಲ್ಲೆಯ ಕಾರಟಗಿಯ ಅವರ ನಿವಾಸದಲ್ಲಿ ಭೇಟಿಯಾದ ನಿಯೋಗದ ಸದಸ್ಯರು, ಸಚಿವರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಶರಣಗೌಡ ಪೊಲೀಸ್ ಪಾಟೀಲ್, ಬಳ್ಳಾರಿ ಜಿಲ್ಲಾ ಸಂಚಾಲಕ ಕಪಗಲ್ ಚಂದ್ರಶೇಖರ ಆಚಾರ್, ಸಂಘಟನಾ ಕಾರ್ಯದರ್ಶಿ ಸಿದ್ದರಾಮ ಸಿರಿಗೇರಿ ಮತ್ತು ವೀರೇಶ್ ಉಪಸ್ಥಿತರಿದ್ದರು