ರಾಮಾ ರಾಮಾ ರೇ ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ ‘X&Y’ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದ್ದು, ಟ್ರೇಲರ್ ನಲ್ಲೇ ನಿರ್ದೇಶಕರು ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಚಿತ್ರವನ್ನು ನೋಡುವ ಕಾತುರ ಹೆಚ್ಚಿಸಿದ್ದಾರೆ. ಚಿತ್ರ ಇದೇ ಜೂನ್ 26 ರಂದು ತೆರೆಗೆ ಬರಲಿದೆ.
ನಿರ್ದೇಶಕ ಸತ್ಯಪ್ರಕಾಶ್ ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ‘X&Y’ ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಬಿ.ಎಸ್.ಕೆಂಪರಾಜು, ಕೌಶಿಕ್ ಹರ್ಷ ಸಂಗೀತ ನಿರ್ದೇಶನ ಹಾಗೂ ವರದರಾಜ್ ಕಾಮತ್ ಕಲಾ ನಿರ್ದೇಶನವಿರುವ ಈ ಚಿತ್ರವನ್ನು ಸತ್ಯ ಪಿಕ್ಚರ್ಸ್ ನಿರ್ಮಿಸಿದೆ. ಬೃಂದಾ ಆಚಾರ್ಯ, ಡಿ.ಸತ್ಯಪ್ರಕಾಶ್, ಅಯಾನ, ಅಥರ್ವ ಪ್ರಕಾಶ್, ದೊಡ್ಡಣ್ಣ , ವೀಣಾ ಸುಂದರ್, ಸುಂದರ್ ವೀಣಾ, ಹರಿಣಿ, ಧರ್ಮಣ್ಣ ಕಡೂರ್, ತೇನಪ್ಪನ್ ಮುಂತಾದವರ ‘X&Y’ ಚಿತ್ರದ ತಾರಾಬಳಗದಲ್ಲಿದ್ದಾರೆ.