ನಾಲ್ಕು ರಾಜ್ಯಗಳ ಐದು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ವೆಬ್​ಕಾಸ್ಟಿಂಗ್​

Ravi Talawar
ನಾಲ್ಕು ರಾಜ್ಯಗಳ ಐದು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ವೆಬ್​ಕಾಸ್ಟಿಂಗ್​
WhatsApp Group Join Now
Telegram Group Join Now

ನವದೆಹಲಿ: ಗುಜರಾತ್, ಕೇರಳ, ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ನ ಐದು ವಿಧಾನಸಭಾ ಸ್ಥಾನಗಳಿಗೆ ಇಂದು (ಜೂನ್​ 19) ನಡೆಯಲಿರುವ ಉಪಚುನಾವಣೆಯಲ್ಲಿ ಎಲ್ಲಾ ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ಬಳಸಲಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಈ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಚುನಾವಣಾ ಆಯೋಗದ ಹಿರಿಯ ಅಧಿಕಾರಿಯೊಬ್ಬರು, ಇಂಟರ್ನೆಟ್ ಸಂಪರ್ಕವಿಲ್ಲದಿದ್ದಾಗ, ಅಂತಹ ಮತಗಟ್ಟೆಗಳಲ್ಲಿ ವಿಡಿಯೋಗ್ರಫಿ ಮಾಡಲಾಗುತ್ತದೆ. ಉಳಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಸ್ಥಾನಗಳ ಉಪಚುನಾವಣೆಯಲ್ಲಿ ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ ವೆಬ್‌ಕಾಸ್ಟಿಂಗ್ ಮಾಡಲಾಗುತ್ತದೆ ಎಂದು ತಿಳಿಸಿದರು.

ನೋಡಲ್​ ಅಧಿಕಾರಿಗಳ ಮೇಲ್ವಿಚಾರಣೆ: ಎಲ್ಲಾ ಮತಗಟ್ಟೆಗಳ ಶೇಕಡಾ 100 ರಷ್ಟು ವೆಬ್‌ಕಾಸ್ಟಿಂಗ್ ಇರುತ್ತದೆ. ರಾಜ್ಯ ಮಟ್ಟ, ಜಿಲ್ಲಾ ಮಟ್ಟ ಮತ್ತು ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ವೆಬ್‌ಕಾಸ್ಟಿಂಗ್ ಮೇಲ್ವಿಚಾರಣಾ ನಿಯಂತ್ರಣ ಕೊಠಡಿ ಇರಬೇಕು ಹಾಗೂ ಇದನ್ನು ಪ್ರತಿ ಹಂತದಲ್ಲಿ ನೇಮಿಸಲಾದ ನೋಡಲ್ ಅಧಿಕಾರಿಗಳು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಚುನಾವಣಾ ಸಮಿತಿ ತಿಳಿಸಿದೆ.

WhatsApp Group Join Now
Telegram Group Join Now
Share This Article