ಬೆಳಗಾವಿ ಪಾಲಿಕೆ ಬಿಜೆಪಿ ಸದಸ್ಯರ ಸದಸ್ಯತ್ವ ಕ್ಯಾನ್ಸಲ್‌: ಮೇಯರ್ ಸ್ಥಾನವೂ ಶೇಕ್‌

Ravi Talawar
ಬೆಳಗಾವಿ ಪಾಲಿಕೆ ಬಿಜೆಪಿ ಸದಸ್ಯರ ಸದಸ್ಯತ್ವ ಕ್ಯಾನ್ಸಲ್‌: ಮೇಯರ್ ಸ್ಥಾನವೂ ಶೇಕ್‌
WhatsApp Group Join Now
Telegram Group Join Now

ಬೆಳಗಾವಿ, ಜೂನ್​ 27: ಅಧಿಕಾರ ದುರ್ಬಳಕೆ ಮಾಡಿಕೊಂಡು ತಿನಿಸು ಕಟ್ಟೆಯಲ್ಲಿ ಮಳಿಗೆ ಪಡೆದ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಮಹತ್ವದ ಬೆಳವಣಿಗೆಯಾಗಿದೆ. ಬೆಳಗಾವಿ ಮಹಾನಗರ ಪಾಲಿಕೆಯ ಹಾಲಿ ಮೇಯರ್ ಹಾಗೂ ಓರ್ವ ಸದಸ್ಯನ ಸದಸ್ಯತ್ವ ಅನರ್ಹತೆ ಖಾಯಂ ಮಾಡಿ ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.

ದೂರಿನ ಆಧಾರದ ಮೇಲೆ ಸುದೀರ್ಘ ವಿಚಾರಣೆ ನಡೆಸಿದ ಪ್ರಾದೇಶಿಕ ಆಯುಕ್ತ ಎಸ್​ಬಿ ಶೆಟ್ಟೆನ್ನವರ್ ಸದಸ್ಯತ್ವ ರದ್ದು ಮಾಡಿ ಆದೇಶ ಹೊರಡಿಸಿದ್ದರು. ತಮ್ಮ ಸದಸ್ಯತ್ವ ರದ್ದತಿಯನ್ನು ಪ್ರಶ್ನಿಸಿ ಇಬ್ಬರು ಮಹಾನಗರ ಪಾಲಿಕೆ ಸದಸ್ಯರು ನಗರಾಭಿವೃದ್ದಿ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಮಧ್ಯೆ ಇಬ್ಬರು ಸದಸ್ಯರು ತಮ್ಮ ಸದಸ್ಯತ್ವ ರದ್ದತಿ ಖಂಡಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸರಕಾರಕ್ಕೆ ನಿರ್ದೇಶನ ನೀಡಿತ್ತು.

WhatsApp Group Join Now
Telegram Group Join Now
Share This Article