ಬೆಳಗಾವಿ: ಬಸ್ ನಿಲ್ದಾಣಗಳಲ್ಲಿ ಸಮಸ್ಯೆಗಳನ್ನು ನೀಗಿಸಿ ಪ್ರಯಾಣಿಕರ ಹಿತವನ್ನು ಕಾಪಾಡಲು ಮುಂದಾಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿನ ಹು.ವಿ.ಸ.ಕಂ ನಿ ಸಭಾಂಗಣದಲ್ಲಿ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಜಿಲ್ಲಾ ವ್ಯಾಪ್ತಿಯ ಘಟಕಗಳ ಮತ್ತು ವಿಭಾಗಗಳ ಕುಂದು ಕೊರತೆ ಮತ್ತು ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದ ಅವರು, ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ನಿತ್ಯ ತೆರೆಳಲು ಸೂಕ್ತ ಸಾರಿಗೆ ವ್ಯವಸ್ಥೆ ದೃಷ್ಟಿಯಿಂದ ಶೀಘ್ರವೇ ಹೆಚ್ಚುವರಿ ಬಸ್‌ಗಳನ್ನು ಬೀಡಲು ಮೇಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.
ಸಿಟಿಯಲ್ಲಿ ಶಕ್ತಿ ಯೋಜನೆಯಿಂದ ಪ್ರಯಾಣಿಕರಿಗೆ ಸಮಸ್ಯೆ ಆಗಿದೆ ಎಂದು ಸಚಿವರಿಗೆ ಅಧಿಕಾರಿಗಳು ಮಾಹಿತಿಯನ್ನು ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ವಿದ್ಯಾರ್ಥಿಗಳು ಓಡಾಟಕ್ಕೆ ಮೊದಲೆ ಬಸ್ಸಿನ ಸಮಸ್ಯೆ ಇತ್ತು. ಅದರಲ್ಲೂ ಶಕ್ತಿ ಯೋಜನೆ ಯಿಂದ ವಿದ್ಯಾರ್ಥಿಗಳು ಸಮಸ್ಯೆಯಾಗಿರವುದು ನಿಜ , ಸಮಸ್ಯೆಗಳನ್ನು ಬಗ್ಗೆ ಹರಿಸಲು ಹೆಚ್ಚುವರಿ ಬಸ್‌ಗಳನ್ನು ಬಿಡಲು ಮೇಲಾಧಿಕಾರಿಗಳಿಗೆ ತಿಳಿಸಿ ಶಾಲಾ ಮಕ್ಕಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಹೇಳಿದರು.
ಸಾರಿಗೆ ಇಲಾಖೆಯಲ್ಲಿ ಶೀಘ್ರವೇ ಸಿಬ್ಬಂದಿ ನೇಮಕ: ಧಾರವಾಡ ವಿಭಾಗದ ಸವದತ್ತಿ ಹಾಗೂ ರಾಮದುರ್ಗ ಘಟಕಗಳಲ್ಲಿ ಸಿಬ್ಬಂದಿ ಕೊರತೆಯಿದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶೀಘ್ರವೇ ಈ ಎರಡು ಘಟಕಗಳಿಗೆ ಬೇಕಾಗಿರುವ ಸಿಬ್ಬಂದಿಯನ್ನು ಸಾರಿಗೆ ಅಧಿಕಾರಿಗಳ ಜೊತೆ ಒಂದು ಸುತ್ತಿನ ಸಭೆ ನಡೆಸಿ ನೇಮಕಾತಿ ನಡೆಸಲಾಗುವುದು ಎಂದರು.
ಸ್ಮಾರ್ಟ್ ಸಿಟಿ ಬಸ್ ನಿಲ್ದಾಣ ಉದ್ಘಾಟನೆಗೆ ಸಿಎಂಗೆ ಆಹ್ವಾನ: ಬೆಳಗಾವಿ ನೂತನ ನಗರ ಬಸ್ ನಿಲ್ದಾಣವನ್ನು ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಿಸಲಾಗುತ್ತಿದ್ದು, ಸದ್ಯ ಮುಕ್ತಾಯ ಹಂತದಲ್ಲಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಬೆಳಗಾವಿಯಲ್ಲಿ ವಿವಿಧ ಕಾರ್ಯಕ್ರಮಕ್ಕೆ ಆಹ್ವಾನಿಸಿದ ವೇಳೆ ಸ್ಮಾರ್ಟ್ ಸಿಟಿ ಬಸ್ ನಿಲ್ದಾಣವನ್ನು ಉದ್ಘಾಟನೆ ಮಾಡಿಸಲಾಗುವುದು ಎಂದು ಹೇಳಿದರು.
ಚಿಕ್ಕೋಡಿ ವ್ಯಾಪ್ತಿಯಲ್ಲಿ 50 ಬಸ್ ಹಾಗೂ 150 ಸಿಬ್ಬಂದಿ ಕೊರತೆ ಇದೆ. ಹಾಗೂ ನಿತ್ಯವೂ 5 ಲಕ್ಷ 16 ಸಾವಿರ ಜನರು ಸಂಚಾರ ಮಾಡುತ್ತಿದ್ದಾರೆ. ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಗೆ ಬರಬೇಕಾದ ಒಂದು ಕೋಟಿ ರೂ. ಬಾಕಿ ಉಳಿದುಕೊಂಡಿದೆ ಎಂದು ಬೆಳಗಾವಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ ಹುದ್ದಾರ ಮಾಹಿತಿ ನೀಡಿದರು. ಬಾಕಿ ಉಳಿದ ಮೊತ್ತವನ್ನು ಪರಿಹರಿಸಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಎಲ್ಲವನ್ನೂ ಸರಿಪಡಿಸಲಾಗವುದು ಎಂದು ಸಚಿವರು ಹೇಳಿದರು.
ಲಕ್ಷ್ಮೀ ಜಾತ್ರೆಗೆ ಹೆಚ್ಚುವರಿ ಬಸ್ ಬಿಡುಗಡೆಗೆ ಸೂಚನೆ: ಇತಿಹಾಸ ಪ್ರಸಿದ್ಧ ಕರದಂಟು ನಾಡಿನಲ್ಲಿ 10 ವರ್ಷಗಳ ಬಳಿಕ ಜೂನ್ 30 ರಿಂದ ಜುಲೈ 8 ವರೆಗೆ ಲಕ್ಷ್ಮೀ ದೇವಿ ಜಾತ್ರೆ ನಡೆಯಲಿದ್ದು, ಈ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಭಕ್ತಾಧಿಗಳು ಆಗಮಿಸುವ ನೀರಿಕ್ಷೆ ಇದೆ. ಈ ಜಾತ್ರೆಗೆ ಬರುವ ಜನತೆಗೆ ಸಂಚಾರಕ್ಕೆ ತೊಂದರೆಯಗದಂತೆ ಬೆಳಗಾವಿ ಸೇರಿದಂತೆ ವಿವಿಧ ಘಟಕಗಳಿಂದ ಹೆಚ್ಚುವರಿಯಾಗಿ ಬಸ್ ಬಿಡುಗಡೆ ಮಾಡಬೇಕು. ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗದಂತೆ ಅಧಿಕಾರಿಗಳು ಕಾರ್ಯನಿರ್ವಸಬೇಕು ಎಂದು ಸೂಚಿಸಿದರು.
ಇದೇ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಂಸ್ಥೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಸಾರ್ವಜನಿಕರಿಂದ ಆಲಿಸಿದ ಸಚಿವ ಸತೀಶ್ ಜಾರಕಿಹೊಳಿ ಅವರು ಸೂಕ್ತ ಪರಿಹಾರ ಸೂಚಿಸಿದರು. ಈ ವೇಳೆ ವಿವಿಧ ಬೇಡಿಕೆಗಳನ್ನು ಪೂರೈಸಲು ಸಾರ್ವಜನಿಕರು ಸಲ್ಲಿಸಿದ ಮನವಿ ಪತ್ರಗಳನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಾರಿಗೆ ನಿಗಮ ಅಧ್ಯಕ್ಷ, ಶಾಸಕರಾದ ರಾಜು ಕಾಗೆ, ರಾಜು ಸೇಠ, ವಿಶ್ವಾಸ ವೈದ್ಯ, ಬುಡಾ ಅಧ್ಯಕ್ಷ ಲಕ್ಷ್ಮಣ ರಾವ್ ಚಿಂಗಳೆ, ವ್ಯವಸ್ಥಾಪಕ ನಿರ್ದೇಶಕರು ವಾಕರ ಸಂಸ್ಥೆ ಹುಬ್ಬಳ್ಳಿ ಪ್ರಿಯಂಗಾ ಎಂ., ಬೆಳಗಾವಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ ಹುದ್ದಾ̧ರ, ಸಚಿವರ ಆಪ್ತ ಸಹಾಯಕರಾದ ಮಲಗೌಡ ಪಾಟೀಲ, ಅರವಿಂದ ಕಾರ್ಚಿ, ಕೇಂದ್ರ ಕಚೇರಿ ಹಿರಿಯ ಅಧಿಕಾರಿಗಳು, ಶಶೀದರ ಮರಿ ದೇವರಮಠ ಹಾಗೂ ಇತರರು.