ಚಿಕ್ಕಬಳ್ಳಾಪುರ: “ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಂಪೂರ್ಣ 5 ವರ್ಷ ನಾನೇ ಸಿಎಂ ಆಗಿರ್ತೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಐತಿಹಾಸಿಕ ನಂದಿಗಿರಿಧಾಮದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲ್ಲಿದ್ದು, ಇದಕ್ಕೂ ಮುನ್ನ ಸಿದ್ದರಾಮಯ್ಯ ಮತ್ತು ಸಚಿವ ಸಂಪುಟದ ಸದಸ್ಯರು ಭೋಗ ನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ದೇವಸ್ಥಾನದ ಮುಂಭಾಗ ಸಚಿವ ಸಂಪುಟದ ಫೋಟೋ ಶೂಟ್ ಸಹ ನಡೆಯಿತು.