ಬಳ್ಳಾರಿ,ಜು.02: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಮತ್ತು ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಧ್ಯಸ್ಥಿಕೆ ಸಂಧಾನ ಯೋಜನಾ ಸಮಿತಿ ವತಿಯಿಂದ ‘ರಾಷ್ಟçಕ್ಕಾಗಿ ಮಧ್ಯಸ್ಥಿಕೆ ಅಭಿಯಾನ’ ವು ಜುಲೈ 01, 2025 ರಿಂದ ಅಕ್ಟೋಬರ್ 07, 2025 ರವರೆಗೆ ನಿಗದಿಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ.
‘ರಾಷ್ಟçಕ್ಕಾಗಿ ಮಧ್ಯಸ್ಥಿಕೆ’ ಅಭಿಯಾನವು ದೇಶದ ಎಲ್ಲಾ ತಾಲ್ಲೂಕು ನ್ಯಾಯಾಲಯಗಳು, ಜಿಲ್ಲಾ ನ್ಯಾಯಾಲಯಗಳು ಮತ್ತು ಹೈಕೋರ್ಟ್ಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸಲು ಇದು 90 ದಿನಗಳ ತೀವ್ರವಾದ ಅಭಿಯಾನವಾಗಿದೆ.
ಸುಪ್ರೀಂ ಕೋರ್ಟ್ನ ಮಧ್ಯಸ್ಥಿಕೆ ಮತ್ತು ಸಂಧಾನ ಯೋಜನಾ ಸಮಿತಿಯ ಸಹಯೋಗದೊಂದಿಗೆ ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರವು ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಭಾರತದ ಸುಪ್ರೀಂ ಕೋರ್ಟ್ನ ನ್ಯಾಯಾಧೀಶರು ಮತ್ತು ಎನ್‌ಎಎಲ್‌ಎಸ್‌ಎ ಕಾರ್ಯನಿರ್ವಾಹಕ ಅಧ್ಯಕ್ಷರು ಮತ್ತು ಎಂಸಿಪಿಸಿ ಅಧ್ಯಕ್ಷರು ಆದ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಮಾರ್ಗದರ್ಶನದಲ್ಲಿ ರಾಷ್ಟçಕ್ಕಾಗಿ ವಿಶೇಷ ಮಧ್ಯಸ್ಥಿಕೆ ಅಭಿಯಾನ ರೂಪಿಸಿದೆ.
ಹಾಗಾಗಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟçಕ್ಕಾಗಿ ಮಧ್ಯಸ್ಥಿಕೆ’ ಅಭಿಯಾನದಂತೆ ಜುಲೈ 1, 2025 ರಿಂದ ಅಕ್ಟೋಬರ್ 7, 2025 ರವರೆಗೆ ಮಧ್ಯಸ್ಥಿಕೆ ಮೂಲಕ ರಾಜಿಯಾಗಬಹುದಾದ ಕ್ರಿಮಿನಲ್ ಮತ್ತು ಸಿವಿಲ್ ಪ್ರಕರಣಗಳನ್ನು ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸಲಿದ್ದು, ಈ ಅಭಿಯಾನಕ್ಕೆ ಎರಡೂ ಜಿಲ್ಲೆಯ ವಕೀಲರು ಮತ್ತು ಕಕ್ಷಿದಾರರು ಸಹ ಸಹಕಾರ ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.