ರಾಬಕೊವಿ ಜಿಲ್ಲಾ ಹಾಲು ಉತ್ಪಾದಕರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಇಬ್ಬರು ನಾಮಪತ್ರ ಸಲ್ಲಿಕೆ

Ravi Talawar
ರಾಬಕೊವಿ ಜಿಲ್ಲಾ ಹಾಲು ಉತ್ಪಾದಕರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಇಬ್ಬರು ನಾಮಪತ್ರ ಸಲ್ಲಿಕೆ
WhatsApp Group Join Now
Telegram Group Join Now


ಬಳ್ಳಾರಿ,ಜು.02 ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಎರಡನೇಯ ದಿನವಾದ ಮಂಗಳವಾರದAದು ಎರಡು ನಾಮಪತ್ರ ಸಲ್ಲಿಕೆಯಾಗಿವೆ.
ವಿಜಯನಗರ ಜಿಲ್ಲೆಯ ಜಿ.ನಾಗಮಣಿ ಅವರು ಎರಡು ಉಮೇದುವಾರಿಕೆ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಜುಲೈ 02 ಕೊನೆಯ ದಿನವಾಗಿದೆ. ಜುಲೈ 03 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅದೇ ದಿನ ಕ್ರಮಬದ್ಧ ನಾಮಪತ್ರಗಳ ಘೋಷಣೆ ಮಾಡಲಾಗುತ್ತದೆ.
ನಾಮಪತ್ರಗಳನ್ನು ಹಿಂಪಡೆಯಲು ಜುಲೈ 04 ಕೊನೆಯ ದಿನವಾಗಿದೆ. ಜುಲೈ 10 ರಂದು ಮತದಾನ ನಡೆಯಲಿದೆ. ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ ಎಂದು ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಚುನಾವಣಾಧಿಕಾರಿಯೂ ಆದ ಸಹಾಯಕ ಆಯುಕ್ತ ಪಿ.ಪ್ರಮೋದ್ ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article