ಯಶ್‌ ತಾಯಿ ಪುಷ್ಪ ಅರುಣ್ ಕುಮಾರ್  ಚಿತ್ರ ಕೊತ್ತಲವಾಡಿ ಬಿಡುಗಡೆಗೆ ಮುನ್ನ  ಮೊದಲ ಸಾಂಗ್‌ ರಿಲೀಸ್

Ravi Talawar
ಯಶ್‌ ತಾಯಿ ಪುಷ್ಪ ಅರುಣ್ ಕುಮಾರ್  ಚಿತ್ರ ಕೊತ್ತಲವಾಡಿ ಬಿಡುಗಡೆಗೆ ಮುನ್ನ  ಮೊದಲ ಸಾಂಗ್‌ ರಿಲೀಸ್
WhatsApp Group Join Now
Telegram Group Join Now
      ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಅರುಣ್‌ ಕುಮಾರ್‌ ನಿರ್ಮಾಣದ ಮೊದಲ ಸಿನಿಮಾ ‘ಕೊತ್ತಲವಾಡಿ’ ಬಿಡುಗಡೆಗೆ ಸಿದ್ದವಾಗಿದೆ.
     ತಮ್ಮ ಮೊದಲ ಸಿನಿಮಾದ ಪ್ರಚಾರ ಕಾರ್ಯಕ್ಕೆ ಮುಂದಾಗಿದ್ದಾರೆ. ಹೀಗಾಗಿ ಅಣ್ಣಾವ್ರ ಆಶೀರ್ವಾದ ಪಡೆಯಲು ಡಾ.ರಾಜ್ ಸ್ಮಾರಕಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರಚಾರದ ಅಂಗವಾಗಿ ‘ಕೊತ್ತಲವಾಡಿ’ ಮೊದಲ ಹಾಡು ಅನಾವರಣಗೊಂಡಿದೆ. ಎಂ ಟಿ ಆರ್
 ಮ್ಯೂಸಿಕ್‌ ಯೂಟ್ಯೂಬ್‌ನಲ್ಲಿ ಮುಂಗಾರು ಮಳೆಯೆಂಬ ವಿಡಿಯೋ ಹಾಡು ಬಿಡುಗಡೆ ಮಾಡಲಾಗಿದೆ. ಪ್ರಮೋದ್‌ ಮರವಂತೆ ಸಾಹಿತ್ಯ ಬರೆದಿದ್ದು ನಿಶಾನ್ ರೈ, ಸುನಿಧಿ ಗಣೇಶ್ ಹಾಡಿದ್ದು, ವಿಕಾಸ್ ವಸಿಷ್ಠ ಸಂಗೀತ ಒದಗಿಸಿದ್ದಾರೆ. ಪೃಥ್ವಿ ಅಂಬರ್‌ ಹಾಗೂ ಕಾವ್ಯಾ ಶೈವ ಹಾಡಿನಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.
     ಆಗಸ್ಟ್ 1ಕ್ಕೆ ಯಶ್ ತಾಯಿ ಪುಷ್ಪ ಅವರು ನಿರ್ಮಿಸಿರುವ ಚೊಚ್ಚಲ ಚಿತ್ರ ‘ಕೊತ್ತಲವಾಡಿ’ ರಿಲೀಸ್‌ ಆಗುತ್ತಿದೆ. ಯುವ ಪ್ರತಿಭೆ ಶ್ರೀರಾಜ್ ಅವರ ನಿರ್ದೇಶನ ಮೊದಲ ಚಿತ್ರ ಇದಾಗಿದ್ದು, ಪೃಥ್ವಿ ಅಂಬರ್ ನಾಯಕನಾಗಿ ಹಾಗೂ ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ.  ಚಿತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ಅವರಂತಹ ಅನುಭವಿ ತಾರಾಬಳಗ ಚಿತ್ರದಲ್ಲಿದೆ. ಇಲ್ಲಿಯವರೆಗೂ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ‘ಕೊತ್ತಲವಾಡಿ’ ಚಿತ್ರದಲ್ಲಿ ಕಂಪ್ಲೀಟ್ ಮಾಸ್ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ‘ಕೊತ್ತಲವಾಡಿ’ ಟೀಸರ್‌ ಮೂಲಕ ಪ್ರೇಕ್ಷಕರ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದೆ.
     ಸಿನಿಮಾದ ಹಾಡುಗಳಿಗೆ ವಿಕಾಸ್‌ ವಸಿಷ್ಠ ಸಂಗೀತ ಸಂಯೋಜಿಸಿದ್ದಾರೆ. ಕಾರ್ತಿಕ್ ಎಸ್. ಛಾಯಾಗ್ರಹಣ, ರಾಮಿಸೆಟ್ಟಿ ಪವನ್ ಸಂಕಲನ, ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ವಿ. ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್, ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಬರೆದಿದ್ದು, ಅಭಿನಂದನ್‌ ಕಶ್ಯಪ್‌ ಹಿನ್ನೆಲೆ ಸಂಗೀತ ನೀಡಿದ್ದಾರೆ.
WhatsApp Group Join Now
Telegram Group Join Now
Share This Article