ಬಳ್ಳಾರಿ, ಜು. 02 : ಬಳ್ಳಾರಿ ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆ ಜುಲೈ 02 ರಂದು ತೋರಣಗಲ್ಲಿನಲ್ಲಿ ನಡೆಯಿತು. ಸಭೆಯಲ್ಲಿ ರಾಜ್ಯ ಉಸ್ತುವಾರಿಗಳಾದ ನಿಗಮ್ ಬಂಡಾರಿ ರವರೊಂದಿಗೆ ಭಾಗವಹಿಸಿದ ಮಂಜುನಾಥ್ ಗೌಡರು ಸಭೆಯನ್ನ ಉದ್ದೇಶಿಸಿ ಮಾತನಾಡಿ ಜಿಲ್ಲೆಯ ವಿಶಿಷ್ಟತೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಬಳ್ಳಾರಿ ಜಿಲ್ಲೆ ಕೊಟ್ಟಂತಹ ಕೊಡುಗೆಯನ್ನು ನೆನೆದು ಯುವ ಕಾಂಗ್ರೆಸ್ ಸಂಘಟನೆಯನ್ನು ಬೂತ್ ಮಟ್ಟದಿಂದ ಹೇಗೆ ಬಲಪಡಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಅಬ್ದುಲ್ ದೇಸಾಯಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಆದಿಲ್ ನಜಿರ್, ರಾಹುಲ್ ಜಾರಕಿಹೊಳಿ, ಮಾಧ್ಯಮ ವಿಭಾಗದ ಮುಖ್ಯಸ್ಥರಾದ ದೀಪಕ್ ಗೌಡ, ರಾಜ್ಯ ಕಾರ್ಯದರ್ಶಿ ಆಕಾಶ್ ಕೊನೆರಿ, ತೋರಣಗಲ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಏಕಾಂಬ್ರಪ್ಪನವರು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಮತ್ತು ಮಾಜಿ ಅಧ್ಯಕ್ಷರಾದ ಸಿದ್ದು ಹಳ್ಳೆಗೌಡರು ಉಪಸ್ಥಿತರಿದ್ದರು.