ಬೆಂಗಳೂರು : ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರಿಗೆ ಸೇರಿದ 34.12 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ED) ಶುಕ್ರವಾರ ಮುಟ್ಟುಗೋಲು ಹಾಕಿಕೊಂಡಿದೆ.
ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ಯಾ ರಾವ್‌ಗೆ ಸೇರಿದ ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ತನಿಖಾ ಸಂಸ್ಥೆಯು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನ ವಿಕ್ಟೋರಿಯಾ ಲೇಔಟ್‌ನಲ್ಲಿರುವ ಮನೆ, ಅರ್ಕಾವತಿ ಲೇಔಟ್‌ನಲ್ಲಿನ ನಿವೇಶನ, ತುಮಕೂರಿನಲ್ಲಿರುವ ಕೈಗಾರಿಕಾ ನಿವೇಶನ, ಆನೇಕಲ್ ತಾಲೂಕಿನಲ್ಲಿರುವ ಕೃಷಿ ಜಮೀನನ್ನ ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ.
ಮಾರ್ಚ್ 3ರಂದು ರಾತ್ರಿ ದುಬೈನಿಂದ ಎಮಿರೇಟ್ಸ್ ಏರ್‌ಲೈನ್ಸ್ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ತಪಾಸಣೆಗೊಳಪಡಿಸಿದಾಗ 14.80 ಕೆ.ಜಿ ಚಿನ್ನ ಪತ್ತೆಯಾಗಿತ್ತು.