ಗೋಕಾಕ: ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ನಗರದ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ, ಸಚಿವರೊಂದಿಗೆ ಸಮಾಲೋಚನೆ ನಡೆಸಿದರು.
ತಮ್ಮ ನಿವಾಸಕ್ಕೆ ಆಗಮಿಸಿದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರನ್ನು ಸಚಿವ ಸತೀಶ ಜಾರಕಿಹೊಳಿ ಅವರು ಆತ್ಮೀಯವಾಗಿ ಸ್ವಾಗತಿಸಿ, ಸತ್ಕರಿಸಿದರು. ಈ ವೇಳೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ರಾಜ್ಯ ಕೆಪಿವೈಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ ಜಾರಕಿಹೊಳಿ ಅವರು ಪ್ರಸನ್ನಾನಂದಪುರಿ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.