ಬೆಳಗಾವಿ:ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಿರಿಯ ಕಾಂಗ್ರೆಸ್ ನಾಯಕರಾಗಿರುವ ಬಸವರಾಜ ರಾಯರೆಡ್ಡಿ ಅವರು ರಾಜ್ಯದಲ್ಲಿನ ಹಣಕಾಸು ಪರಿಸ್ಥಿತಿ ಬಗ್ಗೆ ವಾಸ್ತವಿಕ ಸತ್ಯವನ್ನು ತೆರದಿಟ್ಟಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ರಾಯರೆಡ್ಡಿ ಅವರಿಗೆ ಹೆಚ್ಚಿನ ಮಾಹಿತಿ ಇದೆ. ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ವೇತನವನ್ನು ನೀಡಲು ಆಗುತ್ತಿಲ್ಲ. ಸಿದ್ದರಾಮಯ್ಯ ಅವರು ರಸ್ತೆಗಳು ಹಾಗೂ ಅಭಿವೃದ್ಧಿ ಕೆಲಸಗಳು ಆಗಬೇಕು ಎಂದರೆ ಗ್ಯಾರಂಟಿಗಳನ್ನು ಬಿಡಿ ಎಂದು ತಮ್ಮ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರ ಮುಖೇನ ರಾಜ್ಯದ ಜನರಿಗೆ ಹೇಳಿಸುತ್ತಾರೆ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಪತ್ರಿಕಾ ಪ್ರಕಟಣೆ ಮೂಲಕ ಆರೋಪಿಸಿದ್ದಾರೆ.