ಮೈಸೂರು, ಜುಲೈ 09: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿ ನಿರ್ದೇಶನಾಲಯ 300 ಕೋಟಿ ರೂ ಮೌಲ್ಯದ 160 ಆಸ್ತಿ ಮುಟ್ಟುಗೋಲು ಹಾಕಿತ್ತು. ಈ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಬಹಿರಂಗವಾಗಿರಲಿಲ್ಲ. ಆದರೆ ಇದೀಗ ಮುಟ್ಟುಗೋಲು ಹಾಕಿದ ಪಟ್ಟಿಯನ್ನು ಮೈಸೂರು ಅಭಿವೃದ್ಧಿ ಪ್ರಾಧಿಕಾರ ಸೇರಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಇ.ಡಿ ರವಾನೆ ಮಾಡಿದೆ. ಇ.ಡಿ ಬಿಡುಗಡೆ ಮಾಡಿದ ಮೂರನೇ ಪಟ್ಟಿ ಟಿವಿ9ಗೆ ಲಭ್ಯವಾಗಿದ್ದು, ಒಬ್ಬನೇ ವ್ಯಕ್ತಿಗೆ ಅಕ್ರಮವಾಗಿ 30 ರಿಂದ 40 ನಿವೇಶನಗಳು ಕೊಟ್ಟಿರುವುದು ಪತ್ತೆ ಆಗಿದೆ. ಆ ಮೂಲಕ ಮುಡಾ ಪ್ರಕರಣದ ಮತ್ತಷ್ಟು ಕರ್ಮಕಾಂಡ ಬಯಲಾಗಿದೆ.