ಬೆಂಗಳೂರು, ಜುಲೈ 09: ಕನ್ನಡ ಸೇರಿದಂತೆ ಎಸ್‌ಎಸ್‌ಎಲ್‌ಸಿಪ್ರಥಮ ಭಾಷಾ ಪರೀಕ್ಷೆಯ ಅಂಕವನ್ನು 125ರ ಬದಲು 100ಕ್ಕೆ ಸೀಮಿತಗೊಳಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಂದಾಗಿದೆ. ಸದ್ಯ ಈ ವಿಚಾರವಾಗಿ ಸಾಕಷ್ಟು ವಿರೋಧ ಕೇಳಿಬರುತ್ತಿದೆ. ಸಾಹಿತಿ ಬರಗೂರು ರಾಮಚಂದ್ರಪ್ಪ ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಈ ನಿರ್ಧಾರವನ್ನು ಕೈಬಿಡುವಂತೆ ಒತ್ತಾಯಿಸಿದ್ದಾರೆ. ಜೊತೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಪತ್ರ ಬರೆದಿದ್ದು, ಅಂಕಗಳನ್ನ 100ಕ್ಕೆ ಇಳಿಕೆ ಮಾಡುವುದು ಬೇಡವೆಂದು ಮನವಿ ಮಾಡಿದ್ದಾರೆ.
SSLCಯಲ್ಲಿ ಕನ್ನಡ ಭಾಷಾ ಪರೀಕ್ಷೆಯ ಅಂಕ ಕಡಿತಕ್ಕೆ ಬರಗೂರು ರಾಮಚಂದ್ರಪ್ಪ ವಿರೋಧ
