ಮೈಸೂರು: ನಂದಿನಿ ತುಪ್ಪ ನಕಲು ತಡೆಗೆ ನೂತನ ವಿನ್ಯಾಸದ ಪ್ಯಾಕೆಟ್ನ್ನು ಗುರುವಾರ ಬಿಡುಗಡೆ ಮಾಡಲಾಗಿದೆ. ನೂತನ ನಂದಿನಿ ತುಪ್ಪದ ಪ್ಯಾಕೆಟ್ ಹೊಸ ಆರ್ಟ್ ವರ್ಕ್ ಹೊಂದಿದ್ದು, ಗ್ರಾಹಕರನ್ನು ಆಕರ್ಷಿಸಲಿದೆ.
ಮೈಸೂರು ಜಿಲ್ಲಾ ಹಾಲು ಒಕ್ಕೂಟ ಸಹಕಾರ ಸಂಘಗಳ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ಅವರು, ನೂತನ 500 ಮಿಲಿಲೀಟರ್ ಹಾಗೂ 1 ಲೀಟರ್ ಪ್ಯಾಕೆಟ್ ಅನ್ನು ಬಿಡುಗಡೆ ಮಾಡಿದರು.
ಸ್ಕ್ಯಾನ್ ಮಾಡಿದರೆ ಸಂಪೂರ್ಣ ಮಾಹಿತಿ: ಈ ವೇಳೆ ಮಾತನಾಡಿದ ಅವರು, ನೂತನ ನಂದಿನಿ ತುಪ್ಪದ ಪ್ಯಾಕೆಟ್‌ನ ಮೇಲೆ ಹಾಲೋಗ್ರಾಮ್ ಮುದ್ರಿಸಲಾಗಿದ್ದು, ನಕಲು ಮಾಡಲು ಅವಕಾಶವಿಲ್ಲ. ತುಪ್ಪದ ಪ್ಯಾಕೆಟ್ ಕೋಡ್ ಸ್ಕ್ಯಾನ್ ಮಾಡಿದರೆ ಅದರ ಬ್ಯಾಚ್ ನಂಬರ್, ತಯಾರಿಸಿದ ದಿನಾಂಕ ಹಾಗೂ ಯಾವ ದಿನಾಂಕದವರೆಗೆ ಬಳಸಬಹುದು ಎಂಬುದರ ಸಂಪೂರ್ಣ ಮಾಹಿತಿ ಸಿಗಲಿದೆ ಎಂದು ತಿಳಿಸಿದರು.