ರಾಯಬಾಗ: ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ೫೦೦ ಕೋಟಿ ಮಹಿಳೆಯರು ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಮಾಡಿ, ಈ ಯೋಜನೆಯ ಪ್ರಯೋಜ ಪಡೆದಿದ್ದಾರೆ ಎಂದು ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಹೇಳಿದರು.
ಸೋಮವಾರ ಪಟ್ಟಣದ ಬಸ್ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ ೫೦೦ ಕೋಟಿ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಬನಹಟ್ಟಿ-ಬೆಳಗಾವಿ ಬಸ್‌ಗೆ ಪೂಜೆ ಸಲ್ಲಿಸಿ, ಸಿಹಿ ಹಂಚಿ ಮಾತನಾಡಿದ ಅವರು, ಎಲ್ಲ ವರ್ಗದ ಮಹಿಳೆಯರು ಶಕ್ತಿ ಯೋಜನೆ ಲಾಭ ಪಡೆದು, ರಾಜ್ಯಾದ್ಯಾಂತ ಉಚಿತ ಬಸ್ ಪ್ರಯಾಣ ಮಾಡಿದ್ದಾರೆ. ಸರ್ಕಾರದ ಕಾರ್ಯಕ್ಕೆ ಎಲ್ಲ ಮಹಿಳೆಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.
ಕಾಂಗ್ರೆಸ್ ಕಾರ್ಯಕರ್ತರು ಬಸ್‌ನ್ನು ಸಿಂಗರಿಸಿ, ಪೂಜೆ ಸಲ್ಲಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ತಹಶೀಲ್ದಾರ ಸುರೇಶ ಮುಂಜೆ, ತಾ.ಪಂ.ಇಒ ಸುರೇಶ ಕದ್ದು, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಾವೀರ ಮೊಹಿತೆ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಹೇಬ ಕುಲಗುಡೆ, ಶಿವನಗೌಡ ಪಾಟೀಲ, ಬಾಹುಸಾಹೇಬ ಪಾಟೀಲ, ಅರ್ಜುನ ಬಂಡಗರ, ಹಾಜಿ ಮುಲ್ಲಾ, ಫಾರೂಕ ಮೊಮಿನ, ಜ್ಯೋತಿ ಕೆಂಪಟ್ಟಿ, ದಿಲೀಪ ಜಮಾದಾರ, ತಮ್ಮಣ್ಣ ನಾಯಿಕವಾಡಿ, ಅಣ್ಣಪ್ಪ ಭೂವಿ, ಮಾರುತಿ ನಾಯಿಕ, ಬಸವರಾಜ ಮರ್ದಿ, ಕಿರಣ ಕಾಂಬಳೆ, ಶ್ರವಣ ಕಾಂಬಳೆ, ನಿರ್ಮಲಾ ಪಾಟೀಲ, ಶೈಲಜಾ ಕರಿಭೀಮಗೊಳ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
ಫೋಟೊ: ೧೪ ರಾಯಬಾಗ ೧
ಫೋಟೊ ಶೀರ್ಷಿಕೆ: ರಾಯಬಾಗ: ಪಟ್ಟಣದ ಬಸ್ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ ೫೦೦ ಕೋಟಿ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಬನಹಟ್ಟಿ-ಬೆಳಗಾವಿ ಬಸ್‌ಗೆ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಹಾಗೂ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಾವೀರ ಮೊಹಿತೆ ಪೂಜೆ ಸಲ್ಲಿಸಿದರು.