ಧಾರವಾಡ ೨೦೨೫-೨೬ ನೇ ಸಾಲಿನ ಜೂನ್ ೨೦೨೫ ರ ಅಂತ್ಯಕ್ಕೆ ಕೊನೆಗೊಂಡಂತೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ ಮೊದಲನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಜುಲೈ ೨೧, ೨೦೨೫ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಎಲ್ಲ ಜಿಲ್ಲಾಮಟ್ಟದ ಅಧಿಕಾರಿಗಳು ಕೆಡಿಪಿ ಸಭೆಗೆ ತಮ್ಮ ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ನಿಗದಿತ ಸಮಯಕ್ಕೆ ಖುದ್ದಾಗಿ ಹಾಜರಾಗಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.